logo

ರಾಯಬಾಗ-ಕುಡಚಿ :- ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಟ್ರಕ್‌ಗೆ ಬೆಂಕಿ!

ತೆಲಂಗಾಣಕ್ಕೆ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಟ್ರಕ್‌ಗೆ ಬೆಳಗಾವಿ ಜಿಲ್ಲೆಯ ಐನಾಪುರ ಪಟ್ಟಣದಲ್ಲಿ ಸೋಮವಾರ ರಾತ್ರಿ ಸ್ಥಳೀಯರು ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಯಭಾಗ ತಾಲ್ಲೂಕಿನ ಕುಡಚಿ ಪಟ್ಟಣದಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಟ್ರಕ್ ಅನ್ನು ಅಡ್ಡ ಗಟ್ಟಿ ಕಾಗವಾಡ ತಾಲ್ಲೂಕಿನ ಸಿದ್ದೇಶ್ವರ ದೇವಸ್ಥಾನದ ಬಳಿ ತಡೆದು ನಿಲ್ಲಿಸಲಾಗಿದೆ.

ತದನಂತರ ಸ್ಥಳೀಯರು ಪರಿಶೀಲನೆ ನಡೆಸಿದಾಗ, ವಾಹನದೊಳಗೆ ಗೋಮಾಂಸ ಇರುವುದು ಪತ್ತೆಯಾದ ಹಿನ್ನಲೆಯಲ್ಲಿ ಅಲ್ಲಿನ ಸ್ಥಳೀಯ ಎಬಿವಿಪಿ ಕಾರ್ಯಕರ್ತರು ಮತ್ತು ಭಜರಂಗದಳದ ಕಾರ್ಯಕರ್ತರು ಕೋಪಗೊಂಡು ಟ್ರಕ್‌ಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

262
6868 views