logo

ರಾಜ್ಯಾದ್ಯಂತ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲಗಳು ಹಾಗೂ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡುವಂತೆ ಆಗ್ರಹಿಸಿ...

ಚಿಕ್ಕಬಳ್ಳಾಪುರ:
ಸರ್ಕಾರದ ಭೀಕರ ತಾರತಮ್ಯ..
ಒಂದೂ ತರಗತಿ ನಡೆಯದ ನೂರಾರು ಸರ್ಕಾರಿ ಪದವಿ ಕಾಲೇಜುಗಳ ಒಂದೆಡೆ, ಎರಡು ಘಟಕ ಪರೀಕ್ಷೆಗಳನ್ನು ಮುಗಿಸಿ, ಸೆಮಿಸ್ಟರ್ ಪರೀಕ್ಷೆಯ ತಯಾರಿಯಲ್ಲಿರುವ ಖಾಸಗಿ ಪದವಿ ಕಾಲೇಜುಗಳು ಮತ್ತೊಂದೆಡೆ!
ಈ ಕೂಡಲೇ ಅತಿಥಿ ಉಪನ್ಯಾಸಕರನ್ನು ನೇಮಿಸಲು ಒತ್ತಾಯಿಸಿ, ರಾಜ್ಯವ್ಯಾಪಿ ಸರ್ಕಾರಿ ಪದವಿ ವಿದ್ಯಾರ್ಥಿಗಳ ತರಗತಿ ಬಹಿಷ್ಕಾರ. ಚಿಕ್ಕಬಳ್ಳಾಪುರ ಜಿಲ್ಲೆಯ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ತರಗತಿ ಬಹಿಷ್ಕರಿಸಿ ಸರ್ಕಾರದ ಧೋರಣೆಯ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

"ತರಗತಿ ನಡೆಸದೆ ಪರೀಕ್ಷೆ ಬೇಡ".

ಹೋರಾಟದ ಮುಂದಿನ ನಡೆಯಾಗಿ, ತರಗತಿ ನಡೆಸದೆ ಪರೀಕ್ಷೆ ಬೇಡ ಎಂಬ ಘೋಷ ವಾಕ್ಯದೊಂದಿಗೆ ರಾಜ್ಯದಾದ್ಯಂತ ಸಂಘರ್ಷ ನಡೆಸಲು ವಿದ್ಯಾರ್ಥಿಗಳು ಇಂದು ತರಗತಿ ಬಹಿಷ್ಕಾರದ ಹಿನ್ನಲೆಯನ್ನು, ತೀರ್ಮಾನಿಸಿದ್ದಾರೆ. ಅತಿಥಿ ಉಪನ್ಯಾಸಕರಿಲ್ಲದೇ, ಒಂದೂ ತರಗತಿ ನಡೆಯದಿದ್ದರೂ ಸೆಮಿಸ್ಟರ್ ಪರೀಕ್ಷೆ ವೇಳಾಪಟ್ಟಿ ಮತ್ತು ಪರೀಕ್ಷಾ ಶುಲ್ಕದ ಸುತ್ತೋಲೆ ಹೊರಡಿಸಿರುವ ವಿವಿಗಳ ಧೋರಣೆ ಖಂಡನೀಯ. ಸರ್ಕಾರಿ ವಿವಿಗಳು ಖಾಸಗಿ ಪದವಿ ಕಾಲೇಜುಗಳಿಗೆ ಮಾತ್ರವೇ ಇರುವುದೇ ಎಂಬ ಪ್ರಶ್ನೆ ಮೂಡುತ್ತದೆ. ಆದ್ದರಿಂದ ನಮ್ಮ ಹೋರಾಟ ಮುಂದುವರೆಯುತ್ತದೆ..

ಈ ಪ್ರತಿಭಟನೆಯ ಅಧ್ಯಕ್ಷತೆಯನ್ನು AIDSO ಜಿಲ್ಲಾ ಸಂಚಾಲಕರಾದ ಕಿರಣ್ ಕುಮಾರ್ ಎಂ ಅವರು ವಹಿಸಿದ್ದರು ಹಾಗೂ ಎಐಡಿಎಸ್ಓ ರಾಜ್ಯ ಸಮಿತಿಯ ಸದಸ್ಯರಾದ ಸ್ನೇಹ ಅವರು ಉಪಸ್ಥಿತರಿದ್ದರು .ಹಲವು ಕಾಲೇಜುಗಳಿಂದ ವಿದ್ಯಾರ್ಥಿಗಳು ಈ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.

15
571 views