ಹುಕ್ಕೇರಿ :- ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಗೆ ರಾಜೇಂದ್ರ ಪಾಟೀಲ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ ಬಾಲಚಂದ್ರ ಜಾರಕಿಹೊಳಿ!
ಹುಕ್ಕೇರಿ ತಾಲೂಕಿನ 41 ಪಿಕೆಪಿಎಸ್ ಮತದಾರರ ಸಭೆ
ಹುಕ್ಕೇರಿಗೆ ರಾಜೇಂದ್ರ ಪಾಟೀಲ ಅಭ್ಯರ್ಥಿ- ಶಾಸಕ ಬಾಲಚಂದ್ರ ಜಾರಕಿಹೊಳಿ ಘೋಷಣೆ.
ಬೆಳಗಾವಿ- ಎಸ್ ಇದೆ ತಿಂಗಳು ನಡೆಯುವ ಪ್ರತಿಷ್ಠಿತ ಬೆಳಗಾವಿ ಡಿಸಿಸಿ ಬ್ಯಾಂಕಿನ ಚುನಾವಣೆಯಲ್ಲಿ
ಹುಕ್ಕೇರಿ ತಾಲೂಕಿನಿಂದ ರಾಜೇಂದ್ರ ಪಾಟೀಲ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಘೋಷಿಸಿದರು.
ಮಂಗಳವಾರದಂದು ನಗರದ ಖಾಸಗಿ ಹೊಟೇಲ್ ನಲ್ಲಿ ಆಯೋಜಿಸಿದ್ದ ಹುಕ್ಕೇರಿ ತಾಲೂಕಿನ 41 ಪಿಕೆಪಿಎಸ್ ಗಳ ಮತದಾರ( ಡೆಲಿಗೆಟ್)ರನ್ನು ಉದ್ದೇಶಿಸಿ ಮಾತನಾಡಿದರು.