ಕೋಲಾರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಶ್ರೀ ಗುರು ವಾಲ್ಮೀಕಿ ಮಹರ್ಷಿಯವರ ಜಯಂತಿಯನ್ನು ಭಾವಪೂರ್ಣವಾಗಿ ಆಚರಣೆ ಮಾಡಲಾಯಿತು.
ಕೋಲಾರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಶ್ರೀ ಗುರು ವಾಲ್ಮೀಕಿ ಮಹರ್ಷಿಯವರ ಜಯಂತಿಯನ್ನು ಭಾವಪೂರ್ಣವಾಗಿ ಆಚರಣೆ ಮಾಡಲಾಯಿತು. ಈ ಕಾರ್ಯಕ್ರಮವನ್ನು ಬಿಜೆಪಿ ಕೋಲಾರ ಜಿಲ್ಲಾ ಅಧ್ಯಕ್ಷರು ಶ್ರೀ ಓಂ ಶಕ್ತಿ ಚಲಪತಿ ಅವರ ನೇತೃತ್ವದಲ್ಲಿ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಜಿ ಅವರ ಸ್ವದೇಶಿ ಅಭಿಯಾನದ ಪ್ರೇರಣೆಯಿಂದ “ಪ್ರತಿಯೊಬ್ಬರು ಸ್ವದೇಶಿ ವಸ್ತುಗಳನ್ನು ಬೆಳಸಿ, ದೇಶದ ಆರ್ಥಿಕತೆಗೆ ಬೆಂಬಲ ನೀಡಿ” ಎಂಬ ಸಂದೇಶವನ್ನು ಹಂಚಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು, ಹಾಗೂ ಬಿಜೆಪಿ ಮುಖಂಡರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಿದರು.