logo

ಜಿಲ್ಲಾಡಳಿತ ಭವನದ ಆವರಣದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಾಣಕ್ಕೆ ಸಚಿವರಿಗೆ ಮನವಿ

ದೇವನಹಳ್ಳಿ :ಪಟ್ಟಣದ ಪ್ರವಾಸಿ ಮಂದಿರದಲ್ಲಿ ದೇವನಹಳ್ಳಿ ತಾಲೂಕು ಕುರುಬ ಸಮಾಜದ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪರವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.

ಈ ವೇಳೆ ದೇವನಹಳ್ಳಿ ತಾಲೂಕು ಕುರುಬರ ಸಂಘದ ಅಧ್ಯಕ್ಷ ಎಸ್.ಕೆ.ಕೋದಂಡರಾಮ ನವೆಂಬರ್ 8ಕ್ಕೆ ಕನಕದಾಸ ಜಯಂತಿಯ ವಿಜೃಂಭಣೆಯಿಂದ ಆಚರಿಸಲು ಮಠದಿಂದ ಆನೆಯನ್ನು ಕರೆಸಿ ಕನಕದಾಸರ ಭಾವಚಿತ್ರವನ್ನು ಮೆರವಣಿಗೆ ಮಾಡಲು ಅಗತ್ಯವಾದ ಅರಣ್ಯ ಇಲಾಖೆ ಮತ್ತು ಡಿಸಿಪಿ ಅಧಿಕಾರಿಗಳಿಂದ ಅನುಮತಿ ಕೊಡಿಸಬೇಕು ಹಾಗೂ ಜಿಲ್ಲಾಧಿಕಾರಿಗಳ ಭವನದ ಮುಂಭಾಗದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪಿಸಲು ಸ್ಥಳಾವಕಾಶ ಕಲ್ಪಿಸುವಂತೆ ಸಚಿವರಿಗೆ ಮನವಿ ಮಾಡಲಾಯಿತು ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದರು ಎಂದು ಹೇಳಿದರು.


ಇದೇ ಸಂದರ್ಭದಲ್ಲಿ ತಾಲೂಕು ಗ್ಯಾರೆಂಟಿ ಯೋಜನೆಗಳ ಅಧ್ಯಕ್ಷ ಸಿ .ಜಗನ್ನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ .ಸಿ .ಮಂಜುನಾಥ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕುರುಬರ ಸಂಘದ ಜಿಲ್ಲಾಧ್ಯಕ್ಷ ಬೆಟ್ಟೇನಹಳ್ಳಿ ಮಹೇಶ್ ಕುಮಾರ್ ,ಪುರಸಭಾ ಉಪಾಧ್ಯಕ್ಷ ಜಿ.ಎ. ರವೀಂದ್ರ ,ಪದಾಧಿಕಾರಿಗಳಾದ ರವಿಕುಮಾರ್, ಮಂಜುನಾಥ್, ಮುನಿರಾಜು, ಶಶಿಕಲಾ, ಮಾಧವಿ, ಕಾಂತರಾಜು, ಮೀನಾಕ್ಷಿ, ಕೃಷ್ಣಮೂರ್ತಿ, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ರಾಧ ಕೃಷ್ಣ ರೆಡ್ಡಿ ಸೇರಿದಂತೆ ಸಮಾಜದ ಹಲವರು ಉಪಸ್ಥಿತರಿದ್ದರು.

ಚಿತ್ರ: ದೇವನಹಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ದೇವನಹಳ್ಳಿ ತಾಲೂಕು ಕುರುಬ ಸಮಾಜದ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಹಾರ ಸಚಿವ ಕೆ. ಹೆಚ್ . ಮುನಿಯಪ್ಪರವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.

70
1402 views