ಸಚಿವ ಖರ್ಗೆಗೆ ಬೆದರಿಕೆ ಪ್ರಕರಣ ||ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ : ಧರ್ಮು ಗಿರೆಪ್ಪನೋರ್ ಒತ್ತಾಯ
ಯಾದಗಿರಿ : ಸಾರ್ವಜನಿಕ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವಂತೆ ಕೋರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂಗೆ ಪತ್ರ ಬರೆದಿದ್ದರ ವಿರುದ್ಧ ಕರೆ ಮಾಡಿ ಅವಾಚ್ಯವಾಗಿ ನಿಂದಿಸಿದ್ದ ವ್ಯಕ್ತಿಯನ್ನು ಕಲಬುರಗಿ ಹಾಗೂ ಬೆಂಗಳೂರಿನ ತಂಡ ಮಹಾರಾಷ್ಟ್ರದ ಲಾತೂರ್ ನಲ್ಲಿ ಗುರುವಾರ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದು ಕೂಡಲೇ ಆರೋಪಿ ದಿನೇಶ್ ನರೋಣಿ ಮೇಲೆ ಕಠಿಣ ಶಿಕ್ಷೆ ಗುರಿಪಡಿಸುವಂತೆ ಕಾಂಗ್ರೆಸ್ ಯುವ ಮುಖಂಡ ಧರ್ಮು ಗಿರೆಪ್ಪನೋರ್ ಆಗ್ರಹಿಸಿದರು.
ಈ ಪ್ರಕರಣದ ಹಿಂದೆ ಕಾಣದ ಕೈಗಳಿವೆ, ಅವುಗಳನ್ನು ಪತ್ತೆ ಹಚ್ಚಬೇಕೆಂದು ಆಗ್ರಹಿಸಿದರು. ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಯಾದಗಿರಿ ನಗರದಲ್ಲಿ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದರು.