
ಬೆಂಗಳೂರು ಸುತ್ತ ನಗರ ಅರಣ್ಯಕ್ಕೆ ಅವಕಾಶ
# ಹೈದರ್ ಸಾಬ್, ದೇವನಹಳ್ಳಿ ಸುದ್ದಿ
Bangalore Rural: ನಗರೀಕರಣ, ಕೈಗಾರಿಕೀಕರಣಗಳಿಂದಾಗಿ ಬೆಂಗಳೂರಿಗೆ ಇದ್ದ ಉದ್ಯಾನ ನಗರಿ ಎಂಬ ಹೆಗ್ಗಳಿಕೆ ಮಸುಕಾಗಿದೆ. ಆದರೆ, ಇಲ್ಲಿ ಮತ್ತು ಸುತ್ತಮುತ್ತಲಿನ ಪಟ್ಟಣಗಳಲ್ಲಿ ನಗರ ಅರಣ್ಯ ಬೆಳೆಸಲು ಯಥೇಚ್ಛ ಅವಕಾಶ ಗಳಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದರು.
ಬ್ರಿಗೇಡ್ ಫೌಂಡೇಷನ್ ವತಿಯಿಂದ ಶುಕ್ರವಾರ ದೇವನಹಳ್ಳಿ ಸಮೀಪದ ಹರ ಳೂರಿನಲ್ಲಿರುವ ಕೆಐಎಡಿಬಿ ಏರೋಸ್ಪೇಸ್ ಪಾರ್ಕ್-2ರಲ್ಲಿ ಏರ್ಪಡಿಸಿದ್ದ, ಒಂದು ಲಕ್ಷ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಾವು ಕೃಷಿ, ಕೈಗಾರಿಕೆ ಮತ್ತು ಆಹಾರ ಈ ಮೂರೂ ವಲಯಗಳ ನಡುವೆ ಸಮತೋಲನ ಸಾಧಿ ಸಿಕೊಂಡು ಹೋಗಬೇಕಾಗಿದೆ. ಇವು ನಮ್ಮ ಅಸ್ತಿತ್ವ ಮತ್ತು ಅಭಿವೃದ್ಧಿಗೆ ಮೂಲ ಅಗತ್ಯಗಳಾಗಿವೆ. ಇವುಗಳಲ್ಲಿಯಾವುದನ್ನೂ ನಾವು ಬಿಡಲು ಸಾಧ್ಯವಿಲ್ಲ. ಆದ್ದರಿಂದ ಮಿಯಾವಾಕಿ ಅರಣ್ಯದ ಮಾದರಿಯನ್ನು ನಾವು ಅಳವಡಿಸಿಕೊಂಡು, ಪರಿಸರವನ್ನು ಬೆಳೆಸುವ ಕೆಲಸವನ್ನೂ ಮಾಡಬೇಕಾದ ಅಗತ್ಯವಿದೆ ಎಂದರು.
ವಿಜಯಪುರ ಜಿಲ್ಲಾ ಕೇಂದ್ರಕ್ಕೆ ಸಮೀ ಪದಲ್ಲಿರುವ ಮಮದಾಪುರದಲ್ಲಿ ಸೌರ ವಿದ್ಯುತ್ ಮತ್ತು ಹನಿ ನೀರಾವರಿ ಮೂಲಕ ಅರಣ್ಯವನ್ನು ಸೃಷ್ಟಿಸಲಾಗಿದೆ. ಇದರಿಂದಾಗಿ ಗಿಡಮರಗಳಿಂದ ತುಂಬಿರುವ ಎರಡು ಗುಡ್ಡಗಳೇ ಅಲ್ಲಿ ನಿರ್ಮಾಣವಾಗಿವೆ. ಈ ಮಾದರಿಯನ್ನು ಸ್ವತಃ ಅರಣ್ಯ ಇಲಾಖೆ ಅಳವಡಿಸಿಕೊಂಡಿದ್ದು, ವರ್ಷಕ್ಕೆ ಐದು ಕೋಟಿ ಗಿಡ ನೆಡುವ ಗುರಿ ಹಾಕಿಕೊಂಡಿದೆ. ಇದನ್ನು ನೋಡಲು ಬೇರೆಬೇರೆ ರಾಜ್ಯಗಳು ಮತ್ತು ವಿದೇಶಗಳಿಂದಲೂ ಆಸಕ್ತರು ಬರುತ್ತಿದ್ದಾರೆ ಎಂದರು
ನಮಗೆ ಕೃಷಿಯೂ ಬೇಕು, ಕೈಗಾರಿ ಕೆಯೂ ಬೇಕು. ಇತ್ತೀಚೆಗೆ ಲಂಡನ್‌ನಲ್ಲಿ ಕ್ಯೂ ಗಾರ್ಡನ್‌ಗೆ ಭೇಟಿ ಕೊಟ್ಟಿದ್ದಾಗ ಅಲ್ಲಿಯ ಮಾದರಿಗಳನ್ನು ವೀಕ್ಷಿಸಿದೆ. ಅದು ನಮ್ಮ ಲಾಲ್‌ಬಾಗ್‌ನಷ್ಟೇ ಇದ್ದರೂ, ಅತ್ಯುತ್ತಮ ವಿಧಾನಗಳು ಅಲ್ಲಿವೆ. ಇದನ್ನೆಲ್ಲ ನಾನು ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ವಿವರಿಸಿದ್ದೇನೆ. ಕ್ಯೂ ಗಾರ್ಡನ್‌ನಲ್ಲಿರುವ ಮಾದರಿಗಳನ್ನು ನಮ್ಮಲ್ಲೂ ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದರು. ಅಳವಡಿಸಿಕೊಳ್ಳಬಹುದು
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಮಾತನಾಡಿ, ನಾಡು ಹಸಿರಾದರೆ ಬದುಕು ಕೂಡ ಹಸಿರಾಗುತ್ತದೆ ಎಂಬ ಮಾತಿಗೆ ಸಾಕ್ಷಿಭೂತವಾಗಿ ಬ್ರಿಗೇಡ್ ಸಂಸ್ಥೆ ಮಹತ್ವದ ಕೆಲಸ ಮಾಡಿದೆ. ಭೂಮಿ ಯನ್ನು ಸಮತೋಲಿತವಾಗಿ ನೋಡಿಕೊಳ್ಳು ವುದು ಬಹಳ ಮುಖ್ಯ. ಈ ನಿಟ್ಟಿನಲ್ಲಿ ಸರಕಾರದ ಜತೆ ಖಾಸಗಿ ಕಂಪನಿಗಳು ಕೂಡ ಕೈಜೋಡಿಸುವುದು ಅಗತ್ಯ. ಬ್ರಿಗೇಡ್ ಗ್ರೂಪ್ ಇಂಥದ್ದೊಂದು ಮಹತ್ವದ ಕಾರ್ಯ ಮಾಡಿರುವುದು ಶ್ಲಾಘನೀಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬ್ರಿಗೇಡ್ಸಮೂಹದ ಜಯಶಂಕರ್, ಬ್ರಿಗೇಡ್ ಫೌಂಡೇಷನ್ ಸಿಇಒ ಶಿವಯೋಗಿ ಕಳಸದ, ವಿಮಾನ ನಿಲ್ದಾಣ ಪ್ರದೇಶ ಪ್ರಾಧಿಕಾರದ ಅಧ್ಯಕ್ಷ ವಿ.ಶಾಂತಕುಮಾರ್, ನಿವೃತ್ತ ಪೊಲೀಸ್ ಅಧಿಕಾರಿ ಮೇಘರಿಕ್, ಹರಳೂರು ಗ್ರಾಪಂ ಅಧ್ಯಕ್ಷ ದೇವರಾಜು, ಮುಂತಾದವರು ಉಪಸ್ಥಿತರಿದ್ದರು.