logo

ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಸಿ. ಮಂಜುನಾಥ್ ನೇತೃತ್ವದಲ್ಲಿ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ.

ದೇವನಹಳ್ಳಿ: ದೇವನಹಳ್ಳಿ ತಾಲೂಕಿನ ಅತ್ಯಂತ ಎಲ್ಲಾ ಸರ್ಕಾರಿ ಶಾಲೆಗಳಿಗೆ ಸುಮಾರು 10,000 ನೋಟ್ ಪುಸ್ತಕಗಳನ್ನು ಉಚಿತವಾಗಿ ವಿತರಿಸಲಾಯಿತು.

ದೇವನಹಳ್ಳಿ ಪಟ್ಟಣದ ಜೂನಿಯರ್ ಕಾಲೇಜಿನಲ್ಲಿ ನೋಟ್ ಪುಸ್ತಕಗಳ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ ಸಿ ಮಂಜುನಾಥ್ ಮಾತನಾಡಿ, ಸರ್ಕಾರಿ ಶಾಲಾ ಮಕ್ಕಳು ಸಮಾಜದ ಮುಖ್ಯ ವಾಹಿನಿಗೆ ಬರಲು ವಿದ್ಯಾಭ್ಯಾಸಕ್ಕೆ ಪೂರಕವಾಗುವಂತಹ ಎಲ್ಲಾ ಅನುಕೂಲಗಳನ್ನು ಮಾಡಿಕೊಡಲಾಗುತ್ತದೆ. ತಂದೆ ತಾಯಿಗಳಿಗೆ ಹಾಗೂ ಗುರುಗಳಿಗೆ ಹೆಚ್ಚಿನ ಗೌರವವನ್ನು ಕೊಡಬೇಕು. ಮೊಬೈಲ್ ಗೀಳಿನಿಂದ ಹೊರ ಬರಬೇಕು. ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನವನ್ನು ಹರಿಸಬೇಕು ಎಂದು ಸಲಹೆ ಮಾಡಿದರು.

ಕಾರ್ಯಕ್ರಮದಲ್ಲಿ ಗ್ಯಾರೆಂಟಿ ತಾಲೂಕು ಅಧ್ಯಕ್ಷರಾದ ಸಿ.ಜಗನ್ನಾಥ್ ರವರು, ಬಯಪ ಅಧ್ಯಕ್ಷರಾದ ವಿ.ಶಾಂತಕುಮಾರ್ ರವರು, ಪುರಸಭಾ ಅಧ್ಯಕ್ಷರಾದ ಮುನಿಕೃಷ್ಣ ರವರು, ಸದಸ್ಯರಾದ ವೇಣುಗೋಪಾಲ್, ಕಾದಿ ಬೋರ್ಡ್ ಮಾಜಿ ಅಧ್ಯಕ್ಷರಾದ ನಾಗೇಗೌಡ ರವರು, ಮುಖಂಡರಾದ ಶ್ರೀಧರ್ ಮೂರ್ತಿ, ಮುನಿರಾಜು ಬರ್ಮ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಚಿತ್ರ :

15
661 views