ತಾಳಿಕೋಟಿ: ವಿಶ್ವ ಏಡ್ಸ್ ದಿನ ಜಾಥಾ – ಸಾರ್ವಜನಿಕರಲ್ಲಿ ಜಾಗೃತಿ
ವಿಜಯಪುರ ಜಿಲ್ಲೆ ತಾಳಿಕೋಟಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೋಮವಾರ ವಿಶ್ವ ಏಡ್ಸ್ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಎಸ್‌ವಿಎಂ ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ನಡೆಸಲಾಯಿತು. ‘ಏಡ್ಸ್ ನಿವಾರಣೆ – ಜಾಗೃತಿ ನಮ್ಮ ಶಸ್ತ್ರ’ ಎಂಬ ಘೋಷಣೆಗಳೊಂದಿಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.ನಂತರ ಸಮುದಾಯ ಆರೋಗ್ಯ ಕೇಂದ್ರ ಸಭಾಂಗಣದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಆರೋಗ್ಯ ಅಧಿಕಾರಿ ಡಾ. ಶ್ರೀಶೈಲ ಹುಕ್ಕೇರಿ ಮಾತನಾಡಿ, “ಏಡ್ಸ್ ಕುರಿತು ಮುಂಜಾಗ್ರತೆ ಮತ್ತು ಜಾಗೃತಿ ಅತ್ಯಗತ್ಯ. ಜನರಲ್ಲಿ ಅರಿವು ಮೂಡಿಸುವುದೇ ರೋಗ ನಿಯಂತ್ರಣಕ್ಕೆ ಮುಖ್ಯ ಮಾರ್ಗ,” ಎಂದು ಅಭಿಪ್ರಾಯಪಟ್ಟರು.ಕಾರ್ಯಕ್ರಮದ ಪ್ರಸ್ತಾವಿಕ ಭಾಷಣದಲ್ಲಿ ಐಸಿಟಿಸಿ ಸಮಾಲೋಚಕಿ ಶ್ರೀಮತಿ ಕಲ್ಪನಾ ಹೂಗಾರ ಎಚ್ಐವಿ ಹರಡುವ ವಿಧಾನಗಳು, ಮುಂಜಾಗ್ರತಾ ಕ್ರಮಗಳು ಹಾಗೂ ಯುವಕರು ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ವಿವರಿಸಿದರು.ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗ, ಎನ್‌ಜಿಒ ವರ್ಕರ್ಸ್, ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಪಾಲ್ಗೊಂಡರು.