ಆಕಾಶ್ ಸಮೂಹ ಸಂಸ್ಥೆಯಿಂದ ಹನುಮ ಜಯಂತಿ ಪ್ರಯುಕ್ತ ಶ್ರೀ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ
ದೇವನಹಳ್ಳಿ ಪಟ್ಟಣದ ಪ್ರಸನ್ನ ಹಳ್ಳಿ ರಸ್ತೆಯಲ್ಲಿರುವ ಆಕಾಶ್ ಸಮೂಹ ಸಂಸ್ಥೆಗಳ ಆವರಣದಲ್ಲಿ ಹನುಮ ಜಯಂತಿ ಪ್ರಯುಕ್ತ ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಸ್ವಾಮಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.
ಆಕಾಶ್ ಸಮೂಹ ಸಂಸ್ಥೆಗಳ ಸಂಸ್ಥಾಪಕ ಮುನಿರಾಜು ಅವರ ನೇತೃತ್ವದಲ್ಲಿ ಪೂಜೆ ನೆರವೇರಿಸಿ, ಅನ್ನದಾಸೋಹ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಇದೇ ಸಂದರ್ಭದಲ್ಲಿ ಆಕಾಶ್ ಸಮೂಹ ಸಂಸ್ಥೆಗಳ ಉಪಾಧ್ಯಕ್ಷ ಅಮರ್ ಗೌಡ, ವೈದ್ಯಕೀಯ ಸಂಶೋಧನಾ ಕೇಂದ್ರದ ಪ್ರಾಂಶುಪಾಲ ಡಾ.ಶಿವಪ್ರಕಾಶ್, ಮೆಡಿಕಲ್ ಸೂಪರ್ ಡೆಂಟ್ ಡಾ. ಬ್ರಿಜೇಶ್, ವೈದ್ಯಕೀಯ ಕಾಲೇಜಿನ ಉಪನ್ಯಾಸಕರು, ವೈದ್ಯರು, ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.