logo

ದೇಶಕ್ಕೆ ಸ್ವಾತಂತ್ರ್ಯ ಬಂದು 79 ವರ್ಷ, ಸಂವಿಧಾನ ಜಾರಿಗೆ ಬಂದು 75 ವರ್ಷಗಳಾದರೂ ಇನ್ನೂ ಗುಲಾಮಗಿರಿ ವ್ಯವಸ್ಥೆ ಬದಲಾಗಿಲ್ಲ. ಪ್ರಬಲ‌ ಸಮುದಾಯದ ವ್ಯಕ್ತಿ ಎದುರಾದಾಗ ಸ್ವಾಮಿ ಎನ್ನುವ,

ದೇಶಕ್ಕೆ ಸ್ವಾತಂತ್ರ್ಯ ಬಂದು 79 ವರ್ಷ, ಸಂವಿಧಾನ ಜಾರಿಗೆ ಬಂದು 75 ವರ್ಷಗಳಾದರೂ ಇನ್ನೂ ಗುಲಾಮಗಿರಿ ವ್ಯವಸ್ಥೆ ಬದಲಾಗಿಲ್ಲ. ಪ್ರಬಲ‌ ಸಮುದಾಯದ ವ್ಯಕ್ತಿ ಎದುರಾದಾಗ ಸ್ವಾಮಿ ಎನ್ನುವ, ದಲಿತ ಸಮುದಾಯದ ವ್ಯಕ್ತಿ ಎಷ್ಟೇ ಶ್ರೀಮಂತರಾದರೂ ಅವರನ್ನು ಏಕ ವಚನದಲ್ಲಿ ಮಾತನಾಡಿಸುವ ವ್ಯವಸ್ಥೆ ಈಗಲೂ ಇದೆ. ಇದೇ ಗುಲಾಮಗಿರಿಯ ಸಂಕೇತ.‌ ಇದನ್ನು ಕಿತ್ತೆಸೆಯದೇ ಸ್ವಾಭಿಮಾನ ಮೂಡಿಸಲು ಸಾಧ್ಯವಿಲ್ಲ.‌ ಇದನ್ನೇ ನಾರಾಯಣಗುರುಗಳು ಸಾರಿ ಸಾರಿ ಹೇಳಿದ್ದಾರೆ’ ಎಂದರು.
‘ಜಾತಿಯಿಂದ ಯಾರೂ ದೊಡ್ಡವರಾಗುವುದಿಲ್ಲ. ಯಾರೂ ಕೀಳೂ ಆಗುವುದಿಲ್ಲ. ಆದರೆ ವ್ಯಕ್ತಿತ್ವವನ್ನೂ ಜಾತಿ ನೋಡಿಯೇ ಅಳೆಯಲಾಗುತ್ತಿದೆ. ಸಮಾಜದಲ್ಲಿ ಜಾತಿ ಹೆಸರಿನಲ್ಲಿ ನಡೆಯುವ ತಾರತಮ್ಯಗಳು ದೂರವಾಗಬೇಕು. ಜಡತ್ವದ ಜಾತಿ ವ್ಯವಸ್ಥೆ ಬದಲಾಗಬೇಕು. ಅದಕ್ಕಾಗಿ ಮನುಷ್ಯತ್ವದಿಂದ ಕೂಡಿದ ಸಮಾಜ ಕಟ್ಟಬೇಕು’ ಎಂದರು.
‘1925ರಲ್ಲಿ ನಡೆದ ಮಹಾತ್ಮ ಗಾಂಧಿ ನಾರಾಯಣಗುರುಗಳ ನಡುವಿನ ಸಂವಾದ ಹಾಗೂ 1931ರಲ್ಲಿ ಗಾಂಧಿ ಮತ್ತು ಬಿ.ಆರ್.ಅಂಬೇಡ್ಕರ್ ನಡುವೆ ನಡೆದ ಸಂವಾದಗಳಿಗೆ ಐತಿಹಾಸಿಕ ಮಹತ್ವವಿದೆ. ಅವರು ಪ್ರತಿಪಾದಿಸಿದ ಮೌಲ್ಯಗಳ ಹಿಂದಿನ ಆಶಯ ಅರ್ಥ ಮಾಡಿಕೊಳ್ಳಬೇಕು. ಜಾತಿ ಧರ್ಮಗಳನ್ನು, ಮೀರಿ ಮನುಷ್ಯರಾಗಿ ಬಾಳಬೇಕು. ಸಂವಿಧಾನದಲ್ಲಿ ಅಳವಡಿಸಿಕೊಂಡ ಸಹಬಾಳ್ವೆ, ಧರ್ಮ‌ ಸಹಿಷ್ಣುತೆ ಭಾವನೆ ಬೆಳೆಸಿಕೊಂಡರೆ, ಸಾಮಾಜಿಕ‌ ಅಸಮಾನತೆ ನಿವಾರಣೆ ಆಗಲಿದೆ ಎಂದರು.
‘ಶಸ್ತ್ರಚಿಕಿತ್ಸೆಗೆ ಕುರುಬರದ್ದೇ ರಕ್ತ ಬೇಕು ಎಂದು ನಾನು ಕೇಳುವುದಿಲ್ಲ. ದಲಿತರ, ಕ್ರೈಸ್ತರ, ಮುಸ್ಲೀಮರ ರಕ್ತವಾದರೂ ಆಗುತ್ತದೆ. ಆದರೆ, ವಾಸಿ ಆದ ಬಳಿಕ‌ ನೀವು ಯಾವ ಜಾತಿ, ಯಾವ ಧರ್ಮ‌ಎಂದು ಕೇಳುತ್ತೇವೆ. ಅಷ್ಟರಮಟ್ಟಿಗೆ ನಾವು ಸ್ವಾರ್ಥಿಗಳು. ಇದನ್ನು ಬಿಡಬೇಕು.ಜಾತಿ ಹೆಸರಿನಲ್ಲಿ‌ ಜನರನ್ನು ಒಡೆಯುವ ಕೆಲಸ ಆಗಬಾರದು. ಎಲ್ಲರೂ ಮಾನವರಾಗಿ ಬದುಕಬೇಕು’ ಎಂದು ಅವರು ನುಡಿದರು.

0
99 views