ಅಧಿಕಾರಿಗಳು ಗ್ರಾಮ ಮಟ್ಟಕ್ಕೆ ತೆರಳಿ ಸಮಸ್ಯೆ ಪರಿಹರಿಸಿ : ನಾಗಪ್ಪ ಬಿ. ಹೊನಗೇರಾ ಆಗ್ರಹ
ಯಾದಗಿರಿ : ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಧಿಕಾರಿಗಳು ವಾಸ್ತವ್ಯ ಮಾಡಿ ಜನರ ಕುಂದು ಕೊರತೆ ಪರಿಹರಿಸಬೇಕೆಂದು ಕನ್ನಡ ರಕ್ಷಣಾ ವೇದಿಕೆ ಜಿಲ್ಲಾದ್ಯಕ್ಷ ನಾಗಪ್ಪ ಬಿ. ಹೊನಗೇರಾ ಆಗ್ರಹಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಅಧಿಕಾರಿಗಳು ಗ್ರಾಮ ಮಟ್ಟದಲ್ಲಿ ಹೋಗಿ ಸಮಸ್ಯೆ ಆಲಿಸಿ ಪರಿಹರಿಸಿದರೆ ರೈತರು ಬಡ ಕೃಷಿ ಕೂಲಿಕಾರರು ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳಿಗೆ ಬರುವುದು ತಪ್ಪಲಿದೆ.
ಈ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಅಧಿಕಾರಿಗಳು ತೆರಳಬೇಕು ಸಮಸ್ಯೆ ಇತ್ಯರ್ಥ ಪಡಿಸಬೇಕೆಂದು ಅವರು ಆಗ್ರಹಿಸಿದ್ದಾರೆ.ನೀರು, ವಿದ್ಯುತ್, ನೈರ್ಮಲ್ಯ, ಆರೋಗ್ಯ, ಶಿಕ್ಷಣ ಸೇರಿದಂತೆ ಇನ್ನಿತರ ಮೂಲಭೂತ ಸೌಲಭ್ಯಗಳ ಸಮಸ್ಯೆಗಳನ್ನು ಗ್ರಾಮಗಳಲ್ಲಿಯೇ ಪರಿಹರಿಸುವ ವ್ಯವಸ್ಥೆ ಮಾಡಬೇಕು. ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಹಿರಿಯ ಅಧಿಕಾರಿಗಳು ಸಮಾಲೋಚಿಸಿ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಸರ್ಕಾರ ಈ ನಿಟ್ಟಿನಲ್ಲಿಯೋಚಿಸಬೇಕು ಕಾರ್ಯಪ್ರವೃತ್ತವಾಗಬೇಕು ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.