logo

ಹಾರೋಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್ ಮಹಾಪರಿನಿರ್ವಾಣ ದಿನಾಚರಣೆ.

ನಗರದ 15ನೇ ವಾರ್ಡಿನ ಹಾರೋಹಳ್ಳಿ ಗ್ರಾಮದಲ್ಲಿ ಸಂವಿಧಾನದ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನವನ್ನು ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ಬಾಬಾಸಾಹೇಬ್‌ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಗಿದ್ದು, ಅವರ ಮಹೋನ್ನತ ಸೇವೆಯನ್ನು ಸ್ಮರಿಸಿ ಗೌರವ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಹಾರೋಹಳ್ಳಿ ರಮೇಶ್, ವಿಜಿ ಕುಮಾರ್, ರಂಜಿತ್ ಸೇರಿದಂತೆ ಹಲವರು ಗ್ರಾಮದ ಪ್ರಮುಖರು ಭಾಗವಹಿಸಿದ್ದರು. ಸಮಾಜದಲ್ಲಿ ಸಮಾನತೆ, ಸಹೋದರತೆ ಹಾಗೂ ಶಿಕ್ಷಣದ ಮೌಲ್ಯಗಳನ್ನು ಅಂಬೇಡ್ಕರ್‌ ಅವರು ಬೋಧಿಸಿದಂತೆ ಅನುಸರಿಸಬೇಕೆಂದು ಭಾಗವಹಿಸಿದವರು ಅಭಿಪ್ರಾಯ ವ್ಯಕ್ತಪಡಿಸಿದರು.

2
25 views