ದಾವಣಗೆರೆ: ಹೆಚ್.ಐ.ವಿ./ಏಡ್ಸ್ ಅರಿವು ಕಾರ್ಯಕ್ರಮ, ರಕ್ತದಾನ ಶಿಬಿರ ಹಾಗೂ ಚರ್ಚಾ ಸ್ಪರ್ಧೆ.
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ನೆನ್ ಸೊಸೈಟಿ, ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದಾವಣಗೆರೆ, ದಾವಣಗೆರೆ ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ಐ.ಸಿ.ಟಿ.ಸಿ. ಒ.ಬಿ.ಜಿ. ಚಿಗಟೇರಿ ಜಿಲ್ಲಾ ಆಸ್ಪತ್ರೆ ದಾವಣಗೆರೆ ಹಾಗೂ ಎನ್.ಎಸ್.ಎಸ್ ಮತ್ತು ರೆಡ್ ರಿಬ್ಬನ್ ಕ್ಲಬ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದಾವಣಗೆರೆ ಇವರ ಸಹಯೋಗದಲ್ಲಿ ಹೆಚ್.ಐ.ವಿ./ಏಡ್ಸ್ ಅರಿವು ಕಾರ್ಯಕ್ರಮ, ರಕ್ತದಾನ ಶಿಬಿರ ಹಾಗೂ ಚರ್ಚಾ ಸ್ಪರ್ಧೆಯನ್ನು ದಿನಾಂಕ 15-12-2025 ರಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದಾವಣಗೆರೆಯಲ್ಲಿ ಆಯೋಜಿಸಲಾಗಿದೆ.