logo

ಕೆ. ಬೇವಿನಹಳ್ಳಿಯಲ್ಲಿ ಪಲ್ಸ್ ಪೋಲಿಯೊ ಅಭಿಯಾನ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ.


ಹರಿಹರ ತಾಲ್ಲೂಕಿನ ಕೆ. ಬೇವಿನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಮಾನ್ಯ ಶಾಸಕರಾದ ಶ್ರೀ ಬಿ.ಪಿ. ಹರೀಶ್ ಅವರು ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಅಧಿಕೃತ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶವನ್ನು ಪೋಲಿಯೊ ಮುಕ್ತವಾಗಿಡಲು ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ತಿಳಿಸಿದರು.

ನಂತರ ಮಾನ್ಯ ಶಾಸಕರು ಗ್ರಾಮದ ಶ್ರೀ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಆಶೀರ್ವಾದ ಸ್ವೀಕರಿಸಿದರು.

ಅದೇ ವೇಳೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ರೈತರಿಗಾಗಿ ಸಣ್ಣ ನೀರಾವರಿ ಇಲಾಖೆಯ ವತಿಯಿಂದ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿಯಲ್ಲಿ ಕೊಳವೆ ಬಾವಿ ಕೋರೆಯುವ ಕಾರ್ಯಕ್ರಮಕ್ಕೂ ಚಾಲನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರಾದ ಶ್ರೀ ನಾಗರಾಜ್, ಶ್ರೀ ಹಾಲೇಶ್, ಬಿ.ಟಿ ಮಹೇಶ್ವರಪ್ಪ ಚಂದ್ರಪ್ಪ, ಹಾಲೇಶಪ್ಪ, ತೆಲಿಗಿ ರೇಣವಪ್ಪ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

67
2594 views