logo

ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ನಿಗಮದ ವತಿಯಿಂದ ಮಾವು ಬೆಳೆಗಾರರಿಗೆ ತರಬೇತಿ ಕಾರ್ಯಕ್ರಮ

ಕರ್ನಾಟಕ ರಾಜ್ಯ ಮಾವ ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ (ರಿ ) ಅಪೆಡಾ ಹಾಗೂ ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್, ಚಿಕ್ಕಬಳ್ಳಾಪುರ ಜಿಲ್ಲೆ ಇವರುಗಳ ಸಂಯುಕ್ತ ಆಶ್ರಯದಲ್ಲಿ " ಮಾವು ಬೆಳೆಯ ಸಮಗ್ರ ಪೋಷಕಾಂಶಗಳ ನಿರ್ವಹಣೆ ಕೀಟ ಮತ್ತು ರೋಗ ನಿಯಂತ್ರಣ ಹಾಗೂ ರಫ್ತು ಮಾರುಕಟ್ಟೆಗೆ ಉತ್ತೇಜನ " ಎಂಬ ಶೀರ್ಷಿಕೆ ಅಡಿಯಲ್ಲಿ ಮಾವು ಬೆಳೆಗಾರರಿಗೆ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು . ಈ ಕಾರ್ಯಕ್ರಮದ ಉದ್ಘಾಟನೆಯನ್ನು ಡಾ. ಎಮ್ ಸಿ ಸುಧಾಕರ್ ಮಾನ್ಯ ಉನ್ನತ ಶಿಕ್ಷಣ ಸಚಿವರು ಕರ್ನಾಟಕ ಸರ್ಕಾರ ಇವರು ನೆರವೇರಿಸಿ ತಮ್ಮ ಉದ್ಘಾಟನಾ ಭಾಷಣದಲ್ಲಿ ದೇಶದಲ್ಲೇ ಅತಿ ಹೆಚ್ಚು ಮಾವು ಬೆಳೆಯುವುದು ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯಲ್ಲಿ. ಆದರೆ ಪ್ರಸ್ತುತ ಮಾವು ಬೆಳೆಗಾರರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಅವರ ಸಮಸ್ಯೆಗಳಿಗೆ ಪರಿಹಾರ ಸಿಗುವಂತೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ರೈತರು ಈ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು. ಮಾವು ಬೆಳೆಗಾರರ ಅಭಿವೃದ್ಧಿ ನಿಗಮದ ಅಧ್ಯಕ್ಷರಾದಂತ ಡಾ. ಮುದ್ದು ಗಂಗಾಧರ್ ರವರು ಮಾತನಾಡುತ್ತಾ ರೈತರು ನಮ್ಮ ರಾಷ್ಟ್ರದ ಬೆನ್ನೆಲುಬು ಅವರ ಹಿತವನ್ನು ಕಾಪಾಡುವುದೇ ನಮ್ಮ ಗುರಿಯಾಗಿದೆ. ನಮ್ಮ ಕಾಂಗ್ರೆಸ್ ಪಕ್ಷ ರೈತರ ಪರವಾಗಿ ಕಾರ್ಯನಿರ್ವಹಿಸುವ ಪಕ್ಷವಾಗಿದೆ. ನಾನು ರೈತನ ಮಗನಾಗಿ ರೈತರ ಕಷ್ಟವನ್ನು ಚೆನ್ನಾಗಿ ತಿಳಿದವನಾಗಿದ್ದೇನೆ . ಪ್ರಸ್ತುತ ಮಾವು ಬೆಳೆಗಾರರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಮಾವು ಗಿಡಕ್ಕೆ ಕೆಲವು ರೋಗಗಳು ಬರುತ್ತಿದ್ದು ಯಾವ ಕೀಟನಾಶಕಗಳನ್ನು ಸಿಂಪಡಿಸಬೇಕು ಎಂಬುದನ್ನು ಈ ತರಬೇತಿಯಲ್ಲಿ ತಮಗೆ ತಿಳಿಸಿಕೊಡಲಾಗುವುದು. ಜೊತೆಗೆ ಮಾವು ಬೆಳಗಾರರಿಗೆ ಮಾರುಕಟ್ಟೆ ವ್ಯವಸ್ಥೆಯ ಬಗ್ಗೆ ಜಾಗೃತಿ ಮತ್ತು ಮಾಹಿತಿಯನ್ನು ಸಹ ನೀಡಲಾಗುವುದು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು. ಸುಮಾರು 600 ಜನ ರೈತರು ತರಬೇತಿಯಲ್ಲಿ ಭಾಗವಹಿಸಿದ್ದರು. ಸದರಿ ತರಬೇತಿ ಕಾರ್ಯಕ್ರಮದಲ್ಲಿ ನಿವೃತ್ತ ತೋಟಗಾರಿಕಾ ನಿರ್ದೇಶಕರಾದ ಡಾ. ಹಿತ್ತಲಮನಿ ಮತ್ತು ಸಹಾಯಕ ಪ್ರಾಧ್ಯಾಪಕರಾದ ಡಾ. ಅಶ್ವತ್ ನಾರಾಯಣ್ ಹಾಗೂ ಡಾ. ಸಿ. ಜಿ ನಾಗರಾಜ್ ಮತ್ತು ಶ್ರೀಮತಿ ಲಾವಣ್ಯ ರವರು ತರಬೇತಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

59
2831 views