logo

ಗ್ರಾಮ ಪಂಚಾಯತ್ ಅನುದಾನ ಬಿಡುಗಡೆಗೆ ಒತ್ತಾಯ

ಕಲಬುರಗಿ ತಾಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಕಳೆದ 2024-25ನೇ ಸಾಲಿನ 15ನೇ ಹಣಕಾಸು ಯೋಜನೆಅಡಿ ಕಾರ್ಯ ಯೋಜನೆಗೆ ಚಾಲನೆ ಸಿಕ್ಕಿದ್ದರೂ ದುರಾದೃಷ್ಟಕರ ಸಂಗತಿ ಏನೆಂದರೆ, ಕಾಮಗಾರಿ ಕೆಲಸ ಪ್ರಾರಂಭವಾಗಿದ್ದರೂ ಅನುದಾನ ಬಿಡುಗಡೆಗೆ ಮೀನಮೇಷ ಮಾಡಲಾಗುತ್ತಿದ್ದು ಈ ವಿಷಯ ಗ್ರಾಮ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಮನವಿ ಸಲ್ಲಿಸಲಾಗಿದೆ. ಕೂಡಲೇ ಸಿಇಓ ಅವರಿಗೆ ಅನುದಾನ ಬಿಡುಗಡೆಗೆ ಆದೇಶಿಸಬೇಕು. ಇಲ್ಲದಿದ್ದಲ್ಲಿ ಜಿಲ್ಲಾ ಪಂಚಾಯತ್ ಕಚೇರಿಯದುರುಗಡೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕುಮಸಿ ಗ್ರಾಮ ಪಂಚಾಯತ ಅಧ್ಯಕ್ಷ ಶಶಿಕಾಂತ್ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.

24
387 views