logo

ಸಾರ್ವಜನಿಕರ ಕುಂದುಕೊರತೆಗಳ ಆಲಿಕೆಗಾಗಿ ದಾವಣಗೆರೆ ಜಿಲ್ಲಾ ಪೊಲೀಸ್ ಫೋನ್-ಇನ್ ಕಾರ್ಯಕ್ರಮ

ಸಾರ್ವಜನಿಕರ ಕುಂದುಕೊರತೆಗಳ ಆಲಿಕೆಗಾಗಿ ದಾವಣಗೆರೆ ಜಿಲ್ಲಾ ಪೊಲೀಸ್ ಫೋನ್-ಇನ್ ಕಾರ್ಯಕ್ರಮ
ದಾವಣಗೆರೆ, ಜ. 09:
ದಾವಣಗೆರೆ ಜಿಲ್ಲೆಯ ಸಾರ್ವಜನಿಕರ ಕುಂದುಕೊರತೆಗಳು, ಸಲಹೆಗಳು ಹಾಗೂ ಸಮಸ್ಯೆಗಳನ್ನು ನೇರವಾಗಿ ಆಲಿಸುವ ಉದ್ದೇಶದಿಂದ ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಫೋನ್-ಇನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ದಿನಾಂಕ 09-01-2026 ರಂದು ಬೆಳಿಗ್ಗೆ 11 ಗಂಟೆಯಿಂದ 12 ಗಂಟೆಯವರೆಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು, ಯುವಸಮೂಹ ಹಾಗೂ ವಿದ್ಯಾರ್ಥಿಗಳು ನೇರವಾಗಿ ಕರೆ ಮಾಡಿ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ರವರೊಂದಿಗೆ ಸಂವಾದ ನಡೆಸಿ ತಮ್ಮ ಸಮಸ್ಯೆಗಳು ಹಾಗೂ ಕುಂದುಕೊರತೆಗಳನ್ನು ತಿಳಿಸಬಹುದಾಗಿದೆ.
ಫೋನ್-ಇನ್ ಕಾರ್ಯಕ್ರಮಕ್ಕೆ ಕರೆ ಮಾಡಲು 9480803208 ದೂರವಾಣಿ ಸಂಖ್ಯೆಯನ್ನು ನಿಗದಿಪಡಿಸಲಾಗಿದ್ದು, ನಿಗದಿತ ಸಮಯದಲ್ಲಿ ಕರೆ ಮಾಡುವಂತೆ ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ.
ಸಾರ್ವಜನಿಕರೊಂದಿಗೆ ನೇರ ಸಂವಾದ ನಡೆಸುವ ಮೂಲಕ ಕಾನೂನು ಸುವ್ಯವಸ್ಥೆ, ಸಾರ್ವಜನಿಕ ಭದ್ರತೆ ಹಾಗೂ ಪೊಲೀಸ್ ಸೇವೆಗಳಲ್ಲಿ ಇನ್ನಷ್ಟು ಸುಧಾರಣೆ ತರಲು ಈ ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದು ಪೊಲೀಸ್ ಅಧೀಕ್ಷಕಿ ಶ್ರೀಮತಿ ಉಮಾ ಪ್ರಶಾಂತ್ ಅವರು ತಿಳಿಸಿದ್ದಾರೆ.

81
2112 views