
ಬಾಬಾಸಾಹೇಬ್ ಅಂಬೇಡ್ಕರ್ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ–ಸಮಾರೋಪ ಸಮಾರಂಭ
ಬಾಬಾಸಾಹೇಬ್ ಅಂಬೇಡ್ಕರ್ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ–ಸಮಾರೋಪ ಸಮಾರಂಭ
ಜ.10 – ಹರಿಹರ:
ನಗರದ ಬಾಬಾಸಾಹೇಬ್ ಅಂಬೇಡ್ಕರ್ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ದಿನಾಂಕ 10-01-2026 ರಂದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸಮಾರೋಪ ಸಮಾರಂಭವನ್ನು ವಿಜೃಂಭಣೆಯಿಂದ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವು ಬೆಳಿಗ್ಗೆ 11 ಗಂಟೆಗೆ ಆರಂಭಗೊಂಡಿತು. ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಮುಖ್ಯ ಅತಿಥಿಗಳಾದ ನಿವೃತ್ತ ಪ್ರಾಚಾರ್ಯ ಶ್ರೀ ರವಿರಾಜ್ ಬಿ. ಗೆಜ್ಜಿ ಅವರು, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜದ ಅಭಿವೃದ್ಧಿಗೆ ಕೈಜೋಡಿಸಬೇಕೆಂದು ಸಲಹೆ ನೀಡಿದರು.
ಕಾರ್ಯಕ್ರಮದ ಪ್ರಸ್ತಾವಿಕ ಹಾಗೂ ವಾರ್ಷಿಕ ವರದಿಯನ್ನು ರಾಜ್ಯಶಾಸ್ತ್ರ ಉಪನ್ಯಾಸಕ ಶ್ರೀ ಪ್ರಕಾಶ್ ಟಿ.ಎಂ. ಅವರು ವಾಚಿಸಿದರು.
ಮತ್ತೋರ್ವ ಮುಖ್ಯ ಅತಿಥಿಗಳಾದ ನಿವೃತ್ತ ಪ್ರಾಚಾರ್ಯ ಶ್ರೀ ಕೆ. ಕರುಣಾಕರ (ಬಾಬಾಸಾಹೇಬ್ ಅಂಬೇಡ್ಕರ್ ಶತಮಾನೋತ್ಸವ ಪದವಿ ಕಾಲೇಜು, ಹರಿಹರ) ಅವರು ಮಾತನಾಡಿ, ಕ್ರೀಡೆಯ ಮಹತ್ವವನ್ನು ವಿವರಿಸಿ, ವಿದ್ಯಾರ್ಥಿಗಳು ಶಿಸ್ತು, ಪರಿಶ್ರಮ ಹಾಗೂ ದೃಢ ಸಂಕಲ್ಪದೊಂದಿಗೆ ಜೀವನದಲ್ಲಿ ಯಶಸ್ಸು ಸಾಧಿಸಬೇಕೆಂದು ಕರೆ ನೀಡಿದರು.
ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ನೆರವೇರಿಸಲಾಯಿತು. ಟ್ರಸ್ಟಿಗಳಾದ ಶ್ರೀ ವಿದ್ಯಾಧರ್ ಅವರು ವಿಶೇಷ ಹಿತನುಡಿ ಮೊಬೈಲ್ ದೂರವಿದು ಶಿಸ್ತಿನಿಂದ ಅಭ್ಯಾಸ ಮಾಡಿ ಯಶಸ್ವಿಯಾಗಿ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
ಬಹುಮಾನ ವಿತರಣಾ ಕಾರ್ಯಕ್ರಮವನ್ನು ದೈಹಿಕ ಶಿಕ್ಷಣ ಉಪನ್ಯಾಸಕ ಶ್ರೀ ನವೀನ್‌ಕುಮಾರ್ ಎನ್.ಎಂ. ಅವರು ನಿರ್ವಹಿಸಿದರು.
ಡಾ. ಅಜ್ಜಯ್ಯ ಮಾತನಾಡಿ, ಶಿಕ್ಷಣದ ಮಹತ್ವ, ವಿದ್ಯಾರ್ಥಿಗಳಿಗೆ ಜೀವನ ಮತ್ತು ಗುರಿ ಸಾಧನೆಗೆ ಬೇಕಾದ ಅಂಶಗಳನ್ನು ಕುರಿತು ಮಾತಾಡಿದರು .
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಶ್ರೀ ವಿರುಪಾಕ್ಷಪ್ಪ .ಜಿ.ಅವರು ವಹಿಸಿ ಮಾತನಾಡಿ, ಕಾಲೇಜಿನ ಸಾಧನೆಯಲ್ಲಿ ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಶ್ರಮ ಶ್ಲಾಘನೀಯವಾಗಿದೆ ಎಂದು ತಿಳಿಸಿದರು.ಆಡಳಿತ ಮಂಡಳಿ ಸಹಕಾರ ಸ್ಮರಿಸಿದರು, ರಾಷ್ಟ ಮಟ್ಟದ ಕ್ರೀಡೆ ಪಟ್ಟು ಸಾಧನೆ ಮಾಡಿರುವುದು ಸಂತಸ ತಂದಿದೆ ಈ ಸಾಧನೆ ಹೀಗೆ ಮುಂದುವರಿಯಲಿ ಎಂದು ಹಾರೈಸಿದರು.
ಕಾರ್ಯಕ್ರಮವನ್ನು ಶ್ರೀಮತಿ ಕವಿತಾ ಎಸ್.ಎಸ್. ಹಾಗೂ ಶ್ರೀಮತಿ ನಾಜೀಯಾ ಬಾನು ಅವರು ನಿರೂಪಿಸಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕು|| ಸಂಜನ ಮತ್ತು ಸಂಗಡಿಗರಿಂದ ಪ್ರಾರ್ಥನೆ ನೆರವೇರಿತು. ಉಪನ್ಯಾಸಕ ಶ್ರೀ ಗಿರೀಶ್ ಎ. ಅವರು ಸ್ವಾಗತ ಭಾಷಣ ಮಾಡಿದರು. ಇತಿಹಾಸ ಉಪನ್ಯಾಸಕಿ ಶ್ರೀಮತಿ ಶಾಹೀನಾ ಎನ್ ಅವರು ಮಾತನಾಡಿ ಕಲಿಕೆ ಮತ್ತು ಕ್ರೀಡೆ, ದೃಢ ವಿಶ್ವಾಸ. ಏಕಾಗ್ರತೆಯಿಂದ ವಿದ್ಯಾಭ್ಯಾಸ ಮಾಡಿ ಎಂದು ತಿಳಿಸಿದರು. ವಂದನಾರ್ಪಣೆಯನ್ನು ದೈಹಿಕ ನಿರ್ದೇಶಕರಾದ ನವೀನ್ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಪ್ರೌಢಶಾಲೆ ಹರಿಹರದ ಮುಖ್ಯೋಪಾಧ್ಯಾಯರಾದ ಶ್ರೀ ಉಮೇಶ್ ಮಲ್ಲಾಪುರ, ಬಾಬಾಸಾಹೇಬ್ ಅಂಬೇಡ್ಕರ್ ಪ್ರಾಥಮಿಕ ಶಾಲೆ ಹರಿಹರದ ಮುಖ್ಯೋಪಾಧ್ಯಾಯರಾದ ಶ್ರೀ ಹಾಲಪ್ಪನವರ್, , ಸೋಮಶೇಖರ್, ಗುರುರಾಜ್, ಬಿ.ಸಿ. ವಿಶ್ವನಾಥ, ಡಿ.ಆರ್. ಮೆಹರ್ ಉನ್ನಿಸ ಸೇರಿದಂತೆ ಹಲವರು ಭಾಗವಹಿಸಿದ್ದರು.ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.