logo

ಬಿಜೆಪಿ ಮುಖಂಡ ಬಸನಗೌಡ ಪಾಟೀಲರಿಂದ ಪತ್ರಕರ್ತರಿಗೆ ಸನ್ಮಾನ


ತಾಳಿಕೋಟಿ:
ದೇವರ ಹಿಪ್ಪರಗಿ ಮತಕ್ಷೇತ್ರದ ಬಿಜೆಪಿ ಮುಖಂಡ ಹಾಗೂ ಸಮಾಜ ಸೇವಕ ಬಸನಗೌಡ ಪಾಟೀಲ ಯಡಿಯಾಪೂರ ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಪತ್ರಕರ್ತರನ್ನು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪತ್ರಿಕಾ ರಂಗವು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದೆ. ಸಾಮಾಜಿಕ ಜವಾಬ್ದಾರಿಯನ್ನು ಹೊತ್ತು ಹಗಲಿರುಳು ಎನ್ನದೆ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರ ಸೇವೆ ಅತ್ಯಂತ ಮಹತ್ವದ್ದಾಗಿದೆ. ಇಂತಹ ಸೇವೆಯನ್ನು ಗುರುತಿಸಿ ಗೌರವಿಸುವುದು ಸಮಾಜದ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ ನಾನು ನಿಮ್ಮನ್ನು ಗೌರವಿಸುವ ಕಾರ್ಯಕ್ಕೆ ಮುಂದಾಗಿದ್ದೇನೆ ಎಂದು ಹೇಳಿದರು.
ಜನರ ಸೇವೆ ಮಾಡುವ ಉದ್ದೇಶದಿಂದಲೇ ನಾನು ರಾಜಕೀಯ ಕ್ಷೇತ್ರಕ್ಕೆ ಬಂದಿದ್ದೇನೆ. ಯಾದಗಿರಿ ಜಿಲ್ಲಾ ಪಂಚಾಯತ್ ಅಧ್ಯಕ್ಷನಾಗಿ ಕೆಲಸ ಮಾಡಿದ ಅನುಭವ ನನಗಿದೆ. ಕಳೆದ 30 ವರ್ಷಗಳಿಂದ ರಾಜಕೀಯ ಜೀವನದಲ್ಲಿದ್ದು, ಕಾಂಗ್ರೆಸ್ ಪಕ್ಷದಿಂದ ರಾಜಕೀಯ ಆರಂಭಿಸಿ ಕಾರಣಾಂತರಗಳಿಂದ ಅಲ್ಲಿಂದ ಹೊರಬಂದು ಪ್ರಸ್ತುತ ಬಿಜೆಪಿ ಪಕ್ಷದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನನ್ನ ಮುಂದಿನ ರಾಜಕೀಯ ಪಯಣದಲ್ಲಿ ನಿಮ್ಮ ಸಲಹೆ, ಸೂಚನೆ ಹಾಗೂ ಮಾರ್ಗದರ್ಶನ ಅತ್ಯಂತ ಅಗತ್ಯವಾಗಿದೆ. ನನ್ನ ಈ ಸನ್ಮಾನವನ್ನು ಸ್ವೀಕರಿಸಿದ್ದಕ್ಕಾಗಿ ನಿಮಗೆಲ್ಲರಿಗೂ ಹೃತ್ಪೂರ್ವಕ ಕೃತಜ್ಞತೆಗಳು ಎಂದು ಹೇಳಿದರು.
ಕಾರ್ಯಕ್ರಮದ ಪ್ರಾಸ್ತಾವಿಕವಾಗಿ ಸಮಾಜ ಸೇವಕ ಶರಣಗೌಡ ಪಾಟೀಲ (ಕರಿಭಾವಿ) ಮಾತನಾಡಿದರು.
ಕಾರ್ಯಕ್ರಮದಲ್ಲಿ ಪತ್ರಕರ್ತರಾದ ರವಿ ಕಟ್ಟಿಮನಿ, ಅಂಬಾಜಿ ಘೋರ್ಪಡೆ, ಅಬ್ದುಲ್ ಗನಿ ಮಕಾನದಾರ, ಪ್ರವೀಣ ಘೋರ್ಪಡೆ, ಸಂಜಯಸಿಂಗ್ ರಜಪೂತ, ಸಂಗನಗೌಡ ಗಬಸಾವಳಗಿ, ವಿಜಯ ಕಲಾಲ, ರಾಜೇಶ ಇನಾಮದಾರ, ಸುನೀಲ ಅಂಬಿಗೇರ, ಪ್ರವೀಣ ರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಮುಖಂಡರಾದ ಕೆ.ಸಿ. ದೇಸಾಯಿ, ಗುತ್ತಿಗೆದಾರ ಕೆ. ಶ್ರೀನಿವಾಸ ರೆಡ್ಡಿ ಹಾಗೂ ಇತರ ಗಣ್ಯರು ಭಾಗವಹಿಸಿದ್ದರು.

4
258 views