
ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕು
ಬೆಳಗಾವಿ ಜಿಲ್ಲೆ ಅಥಣಿ ತಾಲೂಕು *ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನಿಗಮದ ಅಧ್ಯಕ್ಷರು, ಬೆಳಗಾವಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರು, ಕಾಗವಾಡ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ರಾಜು ಅಣ್ಣಾ ಕಾಗೆ* ಅವರು ದಿ. 21-1-2026ರಂದು ಕಾಗವಾಡ ಮತಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಉಗಾರ ಖುರ್ದದಲ್ಲಿ ಪುರಸಭೆಯಿಂದ ಪ್ರೀತಿ ಬಾರ್‌ದಿಂದ ಭಗತಸಿಂಗ್ ಸರ್ಕಲ್ ವರೆಗೆ ರಸ್ತೆ ಸುಧಾರಣೆ ಕಾಮಗಾರಿಗೆ ಹಾಗೂ 35 ಲಕ್ಷ ರೂ. ವೆಚ್ಚದಲ್ಲಿ ಉಗಾರ ಖುರ್ದ ಸೀಮಿ ಲಕ್ಷ್ಮೀಗುಡಿಯಿಂದ ಮಂಗಸೂಳಿ ಮುಖ್ಯರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿದರು. ಕೆ.ಆರ್.ಐ.ಡಿ.ಎಲ್ ಹಾಗೂ ಅರಣ್ಯ ಇಲಾಖೆಯಿಂದ ಮಂಗಸೂಳಿ ಗ್ರಾಮದ ಶ್ರೀ ಕ್ಷೇತ್ರ ಮಲ್ಲಯ್ಯ ದೇವಸ್ಥಾನಲ್ಲಿ 60 ಲಕ್ಷ ರೂ. ವೆಚ್ಚದಲ್ಲಿ ದೈವಿವನದ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಕಾಗವಾಡ ಮತಕ್ಷೇತ್ರದ ಅಭಿವೃದ್ಧಿಗೆ ಕೋಟ್ಯಂತರ ರೂ. ಅನುದಾನ ಬಿಡುಗಡೆ ಮಾಡುತ್ತಿದೆ. ಈ ಅನುದಾನದಿಂದ ರಸ್ತೆಗಳ ಸುಧಾರಣೆ, ನೀರಾವರಿ ಯೋಜನೆ, ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿ, ಜನತೆಗೆ ಮೂಲ ಸೌಕರ್ಯ ಕಲ್ಪಿಸುವ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ವಿವಿಧ ಅಧಿಕಾರಿಗಳು, ಮುಖಂಡರು, ಗ್ರಾಮಸ್ಥರು ಪಾಲ್ಗೊಂಡಿದ್ದರು.