logo

ಒಂದೊಂದು ಮತ ರಾಷ್ಟ್ರ ನಿರ್ಮಾಣದ ಅಸ್ತ್ರ – ಚಿಕ್ಕನಾಯಕನಹಳ್ಳಿ ತಹಸೀಲ್ದಾರ್ ಮಮತಾ

ಚಿಕ್ಕನಾಯಕನಹಳ್ಳಿಯಲ್ಲಿ ರಾಷ್ಟ್ರೀಯ ಮತದಾನದ ದಿನವನ್ನು ಜಿಲ್ಲಾಕಾನೂನು ಸೇವೆಗಳ ಪ್ರಾಧಿಕಾರ ತುಮಕೂರು, ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಚರಿಸಲಾಯಿತು.
ನಗರದ ನವೋದಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಸಂದರ್ಭದಲ್ಲಿ ಮಾತನಾಡಿದ ತಾಲ್ಲೂಕು ದಂಡಾಧಿಕಾರಿ ಮಮತಾ ಅವರು, “ರಾಷ್ಟ್ರ ನಿರ್ಮಾಣಕ್ಕೆ ಒಂದೊಂದು ಮತವೂ ಅತ್ಯಂತ ಮಹತ್ವದ್ದು. ಯುವಕರು ಪ್ರಜಾಪ್ರಭುತ್ವದ ಅಸ್ತ್ರವಾದ ಮತದಾನವನ್ನು ಬಳಸಿ ತಮ್ಮ ಗುರುತನ್ನು ತಾವೇ ರೂಪಿಸಿಕೊಳ್ಳಬೇಕು” ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ನ್ಯಾಯಾಧೀಶ ಸತೀಶ್, ತಾಲ್ಲೂಕು ದಂಡಾಧಿಕಾರಿ ಮಮತಾ, ವಕೀಲರ ಸಂಘದ ಅಧ್ಯಕ್ಷ ಜ್ಞಾನಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಾಂತರಾಜು, ನವೋದಯ ಕಾಲೇಜಿನ ಪ್ರಾಂಶುಪಾಲ ರವಿಕುಮಾರ್, ತಾಲ್ಲೂಕು ಪಂಚಾಯತ್ ಅಧಿಕಾರಿ ಬಸವರಾಜ್, ವಕೀಲ ಪ್ರದೀಪ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ನವೋದಯ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಮಹಿಳೆಯರು ಭಾಗವಹಿಸಿ, ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿದರು.

1
81 views