logo

2002–03 ಸಾಲಿನ ಹಳೆಯ ವಿದ್ಯಾರ್ಥಿಗಳಿಂದ ಬನ್ನಿಕೋಡಿನ ಕೆಪಿಎಸ್ ಶಾಲೆಗೆ ಪ್ರಿಂಟರ್ ಕೊಡುಗೆ.

2002–03 ಸಾಲಿನ ಹಳೆಯ ವಿದ್ಯಾರ್ಥಿಗಳಿಂದ ಬನ್ನಿಕೋಡಿನ ಕೆಪಿಎಸ್ ಶಾಲೆಗೆ ಪ್ರಿಂಟರ್ ಕೊಡುಗೆ.

ದಿನಾಂಕ 26-01-2026 ರಂದು ಬನ್ನಿಕೋಡಿನ ಕರ್ನಾಟಕ ಪಬ್ಲಿಕ್ ಶಾಲೆಗೆ 2002–03ನೇ ಸಾಲಿನ ಹಳೆಯ ವಿದ್ಯಾರ್ಥಿಗಳು ಶಾಲೆಯ ಶೈಕ್ಷಣಿಕ ಚಟುವಟಿಕೆಗಳಿಗೆ ಸಹಕಾರವಾಗಲು ನೂತನ ಪ್ರಿಂಟರ್ ಅನ್ನು ಕೊಡುಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ವಿ. ಬಿ. ಕೊಟ್ರೇಶಪ್ಪ ಅವರು ಹಳೆಯ ವಿದ್ಯಾರ್ಥಿಗಳ ಸೇವಾಭಾವವನ್ನು ಶ್ಲಾಘಿಸಿ, ಇಂತಹ ಸಹಕಾರದಿಂದ ಶಾಲೆಯ ಆಡಳಿತಾತ್ಮಕ ಹಾಗೂ ಬೋಧನಾ ಕಾರ್ಯಗಳಿಗೆ ಹೆಚ್ಚಿನ ಅನುಕೂಲವಾಗುತ್ತದೆ ಎಂದು ತಿಳಿಸಿದರು. ತಮ್ಮ ವಿದ್ಯಾಭ್ಯಾಸ ಪಡೆದ ಸಂಸ್ಥೆಯ ಅಭಿವೃದ್ಧಿಗೆ ಹಳೆಯ ವಿದ್ಯಾರ್ಥಿಗಳು ಕೈಜೋಡಿಸಿರುವುದು ಇಂದಿನ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದೆ ಎಂದು ಹೇಳಿದರು.

236
6256 views