logo

ನೂತನ ಕಟ್ಟಡಗಳ ಪೂಜೆ ಸಚಿವ ಕೆ.ಎಚ್. ಮುನಿಯಪ್ಪ ಭಾಗಿ

ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮ ಪಂಚಾಯಿತಿ ನೂತನ ಕಟ್ಟಡ, ಕೊಡಗುರ್ಕಿ ಗ್ರಾಮದ ನೂತನ ಪಶು ಚಿಕಿತ್ಸಾಲಯ ಕಟ್ಟಡ ಹಾಗೂ ಅಂಗನವಾಡಿ ಕೇಂದ್ರ ನೂತನ ಕಟ್ಟಡದ ಪೂಜಾ ಕಾರ್ಯಕ್ರಮವನ್ನು ಸಚಿವ ಕೆ.ಎಚ್. ಮುನಿಯಪ್ಪ ನೆರವೇರಿಸುವುದರ ಮೂಲಕ ಅಧಿಕೃತವಾಗಿ ಚಾಲನೆ ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಮಾತನಾಡಿ, ಬಿಜೆಪಿಯವರು ಮಹಾತ್ಮ ಗಾಂಧೀಜಿ ಹೆಸರನ್ನು ತೆಗೆದುಹಾಕಿದ್ದಾರೆ. ಇಡೀ ಭಾರತ ದೇಶದಲ್ಲಿ ಮನರೇಗಾ ಅತಿ ಯಶಸ್ವಿಯಾಗಿ ನಡೆದಿದೆ. ಕೇಂದ್ರದಲ್ಲಿ ಯುಪಿಎ ಸರ್ಕಾರ ಇದ್ದಾಗ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದರು ಆ ಸಂದರ್ಭದಲ್ಲಿ ಈ ಯೋಜನೆ ಜಾರಿ ಆಗಿದೆ. ನಾನು ಸಹ ಅವರ ಜೊತೆಯಲ್ಲಿ ಇದ್ದೆ. ಯೋಜನೆ ಸಮಾಜಮುಖಿಯಾಗಿ ಯಶಸ್ವಿಯನ್ನು ಕಂಡಿದೆ. ಈಗ ಹೆಸರು ಬದಲಾವಣೆ ಮಾಡಿದ್ದಾರೆ. ನಿರಂತರವಾಗಿ ನಮ್ಮ ಹೋರಾಟ ಇರಲಿದೆ. ಮುಂದಿನ ದಿನಗಳಲ್ಲಿ ಮನರೇಗಾ ಹೆಸರಿನಲ್ಲೇ ಮುಂದುವರಿಸುವಂತೆ ಮಾಡಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಬಮುಲ್ ನಿರ್ದೇಶಕ ಎಸ್ ಪಿ ಮುನಿರಾಜು, ಬಿದಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಕಾಶ್, ಗ್ಯಾರಂಟಿ ಯೋಜನೆ ಜಿಲ್ಲಾಧ್ಯಕ್ಷ ರಾಜಣ್ಣ, ತಾಲೂಕ ಅಧ್ಯಕ್ಷ ಜಗನ್ನಾಥ್, ಬಯಪ ಅದ್ಯಕ್ಷ ಶಾಂತಕುಮಾರ್, ನಿರ್ದೇಶಕ ಪ್ರಸನ್ನ ಕುಮಾರ್, ಕೊಡಗುರ್ಕಿ ಎಂ.ಪಿ.ಸಿ.ಎಸ್. ಅಧ್ಯಕ್ಷ ನಾಗರಾಜ್, ಬಿದಲೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಾಗೇಗೌಡ, ಕನ್ನಮಂಗಲ ಗ್ರಾಮ ಪಂಚಾಯಿತಿ ಸದಸ್ಯ ಸೋಮಶೇಖರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಿವಕುಮಾರ್, ತಹಸೀಲ್ದಾರ್ ಅನಿಲ್, ಇಒ ಶ್ರೀನಾಥ್ ಗೌಡ, ಪಿಡಿಒ ಸಿದ್ದರಾಜು, ಕಾರ್ಯದರ್ಶಿ ಚಂದ್ರಶೇಖರ್, ಬಿದಲೂರು ಗ್ರಾಮ ಪಂಚಾಯಿತಿ ಚುನಾಯಿತ ಜನಪ್ರತಿನಿಧಿಗಳು, ಸದಸ್ಯರು ಇದ್ದರು.

- ಹೈದರ್ ಸಾಬ್ ದೇವನಹಳ್ಳಿ

29
1953 views