ಬಿಸಿ ಊಟ ಸೇವಿಸಿ 48 ಮಕ್ಕಳು ಅಸ್ವಸ್ಥ
ಬೀದರ್ ಜಿಲ್ಲೆ ಔರಾದ್ ತಾಲೂಕಿನ ಜಮಾಲ್ಪುರ್ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 48 ಮಕ್ಕಳು ಮಧ್ಯಾಹ್ನದ ಬಿಸಿಯೂಟ ಸೇವಿಸಿ ಆಸ್ವಸ್ಥಗೊಂಡು ಚಿಕಿತ್ಸೆಗೆ ಔರಾದ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಕೆಲವರ ಸ್ಥಿತಿ ಗಂಭೀರ ಇರುವ ಹಿನ್ನೆಲೆ ಬೀದರ್ ಬ್ರೀಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಶಾಸಕ ಪ್ರಭು ಚೌಹಾಣ್ ಆಸ್ಪತ್ರೆಗೆ ದೊಡ್ಡಾಯಿಸಿ ಮಕ್ಕಳ ಆರೋಗ್ಯ ವಿಚಾರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.