logo

ಫೆ.9 ರಂದು UGC ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ : ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಚಂದಪ್ಪ ಮುನಿಯಪ್ಪನೋರ್ ಮನವಿ

ಯಾದಗಿರಿ : ವಿಶ್ವವಿದ್ಯಾಲಯ ಅನುದಾನ ಆಯೋಗ (UGC) SC/ST ಮತ್ತು OBC ವಿದ್ಯಾರ್ಥಿಗಳಿಗೆ ಸಮಾನತೆ ಪ್ರೋತ್ಸಾಹಿಸಲು ತಂದಿರುವ 2026ರ ನಿಯಮಾವಳಿಗಳ ಮೇಲಿನ ಸುಪ್ರೀಂಕೋರ್ಟ್ ತಡೆ ಆಜ್ಞೆಯನ್ನು ತೆರವುಗೊಳಿಸಿ, ಕೇಂದ್ರ ಸರ್ಕಾರ ಕೂಡಲೇ ಅವುಗಳನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿ ಫೆಬ್ರವರಿ 09ರ ಸೋಮವಾರದಂದು ಯಾದಗಿರಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಲು ಡಿಎಸ್‌ಎಸ್ ಜಿಲ್ಲಾ ಸಂಘಟನಾ ಸಂಚಾಲಕ ಚಂದಪ್ಪ ಮುನಿಯಪ್ಪನೋರ್ ಮನವಿ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಅವರು ಬಹಳಷ್ಟು ಶತಮಾನಗಳಿಂದ ಶೋಷಣೆಗೆ ಒಳಗಾಗಿದ್ದ ಸಮುದಾಯಗಳ ಏಳಿಗೆಗಾಗಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಸಾಮಾಜಿಕ ನ್ಯಾಯದ ಹಕ್ಕನ್ನು ನೀಡಿದ್ದಾರೆ. ಆದರೆ ಇಂದು ಸಂವಿಧಾನವೇ ಆತಂಕದಲ್ಲಿದೆ. ದೇಶದ ವಿಶ್ವವಿದ್ಯಾಲಯಗಳಲ್ಲಿ ದಲಿತ, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳು ಜಾತಿ ತಾರತಮ್ಯದ ಸುಳಿಯಲ್ಲಿ ಸಿಲುಕಿ ನರಳುತ್ತಿದ್ದಾರೆ. ಕೆಲವು ಜಾತಿವಾದಿ ಹಿನ್ನೆಲೆಯುಳ್ಳ ಅಧಿಕಾರಿಗಳು ಮತ್ತು ಸಂಘಟನೆಗಳ ಕಿರುಕುಳದಿಂದಾಗಿ ವಿದ್ಯಾರ್ಥಿಗಳು ಬಲಿಯಾಗುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಇದನ್ನು ತಡೆಗಟ್ಟಲು ತಂದಿರುವ UGC ನಿಯಮಾವಳಿಗಳು ಜಾರಿಯಾಗುವುದು ಅನಿವಾರ್ಯವಾಗಿದೆ. ಕಾರಣ ರಾಜ್ಯ ಸಂಚಾಲಕರಾದ ಡಿ.ಜಿ. ಸಾಗರ್ ಅವರ ಆದೇಶದ ಮೇರೆಗೆ ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಹೋರಾಟ ನಡೆಯುತ್ತಿದ್ದು, ಅದರ ಭಾಗವಾಗಿ ಯಾದಗಿರಿ ನಗರದಲ್ಲಿ ಈ ಬೃಹತ್ ಧರಣಿ ನಡೆಯಲಿದೆ. ಸೋಮವಾರ ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾ ಕ್ರೀಡಾಂಗಣದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಮೆರವಣಿಗೆ ಮೂಲಕ ತೆರಳುತ್ತೇವೆ. "ಸಂವಿಧಾನ ಬದ್ಧವಾಗಿ ಸಿಗಬೇಕಾದ ಹಕ್ಕುಗಳ ರಕ್ಷಣೆಗಾಗಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ನಡೆಯುತ್ತಿರುವ ತಾರತಮ್ಯವನ್ನು ವಿರೋಧಿಸಿ ನಡೆಯುತ್ತಿರುವ ಈ ಹೋರಾಟದಲ್ಲಿ ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಕಾರ್ಯಕರ್ತರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು," ಎಂದು ಯಾದಗಿರಿ ಜಿಲ್ಲಾ ಸಂಘಟನಾ ಸಂಚಾಲಕರು ಚಂದಪ್ಪ ಮುನಿಯಪ್ಪನೋರ್ ಪತ್ರಿಕಾ ಪ್ರಕಟಣೆಯಾದಗಿರಿ ಮನವಿ ಮಾಡಿದ್ದಾರೆ.

3
511 views