ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಡಪದ ಸಮಾಜದ ಮನವಿ
ಬೆಂಗಳೂರು: 2025 - 26 ನೇ ಸಾಲಿನ ರಾಜ್ಯ ಬಜೆಟ್ ಪೂರ್ವಭಾವಿ ಸಭೆಯನ್ನು ಕರ್ನಾಟಕ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಇಂದು ಹಿಂದುಳಿದ ವರ್ಗಗಳ ಸಮಾಜದ ಮುಖಂಡರ ಸಭೆಯನ್ನು ವಿಧಾನಸೌಧದ ಸಭಾಭವನದಲ್ಲಿ ಕರೆಯಲಾಗಿತ್ತು ಈ ಸಭೆಯಲ್ಲಿ ಹಿಂದುಳಿದ ವರ್ಗಗಳ ಸಮಾಜದ ಮುಖಂಡರು ತಮ್ಮ ಸಮಾಜದ ಬೇಡಿಕೆಗಳನ್ನು ಮಾನ್ಯ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಯಿತು.
ಇದೇ ಸಂದರ್ಭದಲ್ಲಿ ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘ (ರಿ) ಬೆಂಗಳೂರು ಇದರ ರಾಜ್ಯಾಧ್ಯಕ್ಷರಾದ ಶ್ರೀ ದೇವು ಹಡಪದ ಕಾರ್ಯದಕ್ಷರದ ಶ್ರೀ ಗದ್ದೇಪ್ಪ ಜಕ್ಕೇರಮಡು ವಿಜಯನಗರ ಜಿಲ್ಲೆಯ ಜಿಲ್ಲಾ ಪ್ರತಿನಿಧಿಗಳಾದ ಶ್ರೀ ಸಿದ್ದಲಿಂಗ ಸ್ವಾಮಿ (ಅಪ್ಪಾಜಿ) ಇವರ ಸಮಾಜದ ವಿವಿಧ ಬೇಡಿಕೆಗಳ ಮಾನ್ಯ ಮುಖ್ಯಮಂತ್ರಿಗಳಿಗೆ ಬರುವ ಬಜೆಟ್ ನಲ್ಲಿ ಸಮಾಜದ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಸಮಸ್ತ ಸಮಾಜದ ಪರವಾಗಿ ಮನವಿ ಮಾಡಿಕೊಂಡರು