logo

ಸಂತ ಕವಿ ಸರ್ವಜ್ಞರ ತ್ರಿಪದಿಗಳು ಸಾರ್ವಕಾಲಿಕ ಅಪರ ಜಿಲ್ಲಾಧಿಕಾರಿ

*ಸಂತ ಕವಿ ಸರ್ವಜ್ಞ ಜಯಂತಿ ಆಚರಣೆ
*ಸಂತ ಕವಿ ಸರ್ವಜ್ಞರ ತ್ರಿಪದಿಗಳು ಸಾರ್ವಕಾಲಿಕ:ಎಡಿಸಿ*

ದೇವನಹಳ್ಳಿ:16ನೇ ಶತಮಾನದ ಪ್ರಸಿದ್ದ ಕನ್ನಡ ತ್ರಿಪದಿ ಕವಿ ದಾರ್ಶನಿಕ ಮತ್ತು ವಾಸ್ತವಿಕವಾದಿ ಸರ್ವಜ್ಞರ ರಚಿಸಿದ ತ್ರಿಪದಿಗಳು ಸಾರ್ವಕಾಲಿಕ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಸಂತ ಕವಿ ಸರ್ವಜ್ಞರ ಜಯಂತಿಯಲ್ಲಿ ಸರ್ವಜ್ಞರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿ ಮಾತನಾಡಿದರು.

ಜಾತಿ ಪದ್ಧತಿ, ಮೂಢನಂಬಿಕೆ ಮತ್ತು ಸಾಮಾಜಿಕ ಅಸಮಾನತೆಯ ವಿರುದ್ಧ ಅವರು ತಮ್ಮ ಕವಿತೆಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಅವರ ಕೊಡುಗೆ ಅಪಾರ.

ಕಠಿಣವಾದ ಭಾಷೆಯನ್ನು ಬಳಸದೆ, ಜನಸಾಮಾನ್ಯರಿಗೆ ಅರ್ಥವಾಗುವ ಅಚ್ಚಗನ್ನಡದಲ್ಲಿ ಜೀವನದ ಮೌಲ್ಯಗಳನ್ನು ಬೋಧಿಸಿದವರು. ಹಾಗಾಗಿ ಅವರನ್ನು ತ್ರಿಕಾಲ‌ ಜ್ಞಾನಿ ಎಂದು ಕರೆಯುತ್ತಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಪಂ ಯೋಜನಾಧಿಕಾರಿ ರಾಮಕೃಷ್ಣ, ನಗರಾಭಿವೃದ್ಧಿ ಯೋಜನಾ ನಿರ್ದೇಶಕ ರಮೇಶ್, ಪಶು ಇಲಾಖೆ ಉಪನಿರ್ದೇಶಕ ಡಾ.ಜಗದೀಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

ವರದಿ: ಹೈದರ್ ಸಾಬ್

0
835 views