logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಇಂದು ತುಮಕೂರು ಜಿಲ್ಲೆಯ ಪಾವಗಡ ತಾಲೂಕು ಹಾಗೂ ಮಧುಗಿರಿ ತಾಲೂಕು ಪ್ರವಾಸ ಕೈಗೊಂಡು

ಇಂದು ತುಮಕೂರು ಜಿಲ್ಲೆಯ ಪಾವಗಡ ತಾಲೂಕು ಹಾಗೂ ಮಧುಗಿರಿ ತಾಲೂಕು ಪ್ರವಾಸ ಕೈಗೊಂಡು

1.ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ನಗರದ ವಾರ್ಡ್ ಗಳಿಗೆ ಭೇಟಿ ನೀಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅಡಿ ತುಂಗಭದ್ರಾ ಜಲಾಶಯದಿಂದ ಸರಬರಾಜಾಗುತ್ತಿರುವ ನೀರು ಪಾವಗಡ ನಗರದಲ್ಲಿ ಸರಿಯಾಗಿ ಸರಬರಾಜಾಗದ ಹಿನ್ನೆಲೆಯಲ್ಲಿ ಭೇಟಿ ನೀಡಿ ಕಾಮಗಾರಿಯನ್ನು ಪರಿವೀಕ್ಷಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಲಾಯಿತು.

2.ಪಾವಗಡ ನಗರದ ಶಾರದಾ ಶಾಲೆಗೆ ಭೇಟಿ ನೀಡಿ SSLC ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ವಾರ್ಷಿಕ ಪರೀಕ್ಷೆಯನ್ನು ಉತ್ತಮವಾಗಿ ಬರೆಯುವಂತೆ ಆತ್ಮಸ್ಥೈರ್ಯ ತುಂಬಲಾಯಿತು.

3.ಕೋಟೆಗುಡ್ಡ KPS ಶಾಲೆಗೆ ಭೇಟಿ ನೀಡಿ ಪರಿಶೀಲನೆಮಾಡಿ ಶಿಕ್ಷಕರು ಸರಿಯಾದ ಸಮಯಕ್ಕೆ ಶಾಲೆಗೆ ಬಾರದ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನಲೆಯಲ್ಲಿ ಅಂತಹ ಶಿಕ್ಷಕರ ಮೇಲೆ ಶಿಸ್ತುಕ್ರಮ ತೆಗೆದುಕೊಳ್ಳಲು ಮಧುಗಿರಿ DDPI ಮತ್ತು ಪಾವಗಡ BEO ಗಳಿಗೆ ಸೂಚಿಸಲಾಯಿತು ಮತ್ತು SSLC ಪೂರ್ವಸಿದ್ಧತ ಪರೀಕ್ಷೆಯಲ್ಲಿ ಹೆಚ್ಚು ವಿದ್ಯಾರ್ಥಿಗಳು ಅನುತ್ತೀರ್ಣ ರಾಗಿದ್ದು ಮುಂಬರುವ ಪರೀಕ್ಷೆಗಳಲ್ಲಿ ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವಂತೆ ಶಿಕ್ಷಕರಿಗೆ ಸೂಚನೆ ನೀಡಲಾಯಿತು.

4. ಪಾವಗಡ ನಗರದಲ್ಲಿರುವ ಪಿಎಂ ಶ್ರೀ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.

5. ಮಧುಗಿರಿ ನಗರದಲ್ಲಿರುವ ಪಿಎಂಶ್ರೀ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ SSLC ಪೂರಕ ಪರೀಕ್ಷೆಯಲ್ಲಿನ ಫಲಿತಾಂಶವನ್ನು ಅವಲೋಕಿಸಿ ಮುಂಬರುವ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವಂತೆ ಶಿಕ್ಷಕರಿಗೆ ಸೂಚನೆಗಳನ್ನು ನೀಡಲಾಯಿತು.

0
34 views

Comment