ಡಾ.ಅಂಜಲಿ ನಿಂಬಾಳ್ಕರಗೆ ಪುದುಚೇರಿ ವಿಧಾನಸಭಾ ಚುನಾವಣೆಯ ಹೆಚ್ಚುವರಿ ಜವಾಬ್ದಾರಿ
ನವದೆಹಲಿ: ಖಾನಾಪೂರದ ಮಾಜಿ ಶಾಸಕಿ ಹಾಗೂ ಎಐಸಿಸಿ ಕಾರ್ಯದರ್ಶಿ ಡಾ. ಅಂಜಲಿ ನಿಂಬಾಳ್ಕರ್ ಅವರಿಗೆ ಪುದುಚೇರಿ ವಿಧಾನಸಭಾ ಚುನಾವಣೆಯ ಹೆಚ್ಚುವರಿ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ. ತಮಿಳುನಾಡು ಮತ್ತು ಪುದುಚೇರಿಯಲ್ಲಿ ಚುನಾವಣೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ಈ ಮಹತ್ವದ ಹೊಣೆಗಾರಿಕೆಯನ್ನು ವಹಿಸಿದೆ. ಈಗಾಗಲೇ ವಿವಿಧ ರಾಜ್ಯಗಳ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸುತ್ತಿರುವ ಅವರು, ಕೇರಳ, ಉತ್ತರಾಖಂಡ ಹಾಗೂ ಉತ್ತರ ಪ್ರದೇಶ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸಂಘಟನೆ ಬಲಪಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.