ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಇಂಗ್ಲೀಷ್ ಪಠ್ಯಕ್ರಮ ಕುರಿತ ಮಹತ್ವದ ಕಾರ್ಯಗಾರ ಯಶಸ್ವಿ.
ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಇಂಗ್ಲೀಷ್ ಪಠ್ಯಕ್ರಮ ಕುರಿತ ಮಹತ್ವದ ಕಾರ್ಯಗಾರ ಯಶಸ್ವಿ.
ದಾವಣಗೆರೆ, ಮಾರ್ಚ್ 02:
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ದಾವಣಗೆರೆ ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್ ಪಠ್ಯಕ್ರಮ” ಕುರಿತ ಒಂದು ದಿನದ ಕಾರ್ಯಗಾರವನ್ನು ದಿನಾಂಕ 02-03-2026 ರಂದು ಉದ್ಘಾಟಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕರಿಬಸಪ್ಪ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ದಾವಣಗೆರೆ ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ಡಾ. ಲೋಕೇಶ್ ಎಂ.ಯು. ಭಾಗವಹಿಸಿ, ಎಸ್.ಇ.ಪಿ ಪಠ್ಯಕ್ರಮದ ಉದ್ದೇಶ, ವಿನ್ಯಾಸ ಮತ್ತು ಪರಿಣಾಮಕಾರಿತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಗ್ಲೀಷ್ ವಿಭಾಗದ ಸಂಯೋಜಕರಾದ ಡಾ. ಫಕ್ಕೀರೇಶ ಹಳ್ಳಳ್ಳಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.
ಈ ಕಾರ್ಯಗಾರದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಪದವಿ ಕಾಲೇಜುಗಳಲ್ಲಿ ಇಂಗ್ಲೀಷ್ ಭಾಷೆ ಮತ್ತು ಸಾಹಿತ್ಯ ಬೋಧಿಸುವ ಪ್ರಾಧ್ಯಾಪಕರು ಭಾಗವಹಿಸಿ, ಪಠ್ಯಕ್ರಮದ ಅನುಷ್ಠಾನ, ಬೋಧನಾ ವಿಧಾನಗಳು ಹಾಗೂ ಮೌಲ್ಯಮಾಪನ ಕ್ರಮಗಳ ಕುರಿತು ವಿಚಾರ ವಿನಿಮಯ ನಡೆಸಿದರು.ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಇಂಗ್ಲೀಷ್ ಪಠ್ಯಕ್ರಮ ಕುರಿತ ಮಹತ್ವದ ಕಾರ್ಯಗಾರ ಯಶಸ್ವಿ.
ವೇದಿಕೆಯಲ್ಲಿ ಪ್ರಾಧ್ಯಾಪಕರಾದ ಡಾ. ಜಯಪ್ಪ, ಡಾ. ಭೀಮಪ್ಪ, ಡಾ. ಮಹೇಶ್ ನಾಯ್ಕ್, ಡಾ.ಮಧುಸೂದನ್,
ಡಾ. ವಿಜಯಕುಮಾರ್,
ಡಾ. ನಾಗನಗೌಡ ಹಾಗೂ
ಡಾ. ಶಿವರಾಜ್, ಡಾ. ತ್ರಿವೇಣಿ,
ಡಾ. ಶಶಿಕಲಾ ಉಪಸ್ಥಿತರಿದ್ದರು.
ಐ ಕ್ಯೂ ಏ ಸಿ ಸಂಯೋಜಕರು ಮತ್ತು ಆಂಗ್ಲ ವಿಭಾಗದ ಮುಖ್ಯಸ್ಥರಾದ
ಡಾ. ಭೀಮಪ್ಪ ಎಂ ಪಿ ಕಾರ್ಯಕ್ರಮದ ಕುರಿತು ಪ್ರಸ್ತಾಪಿಸಿ ಮತ್ತು ಸ್ವಾಗತಿಸಿದರು, ಇತಿಹಾಸ ವಿಭಾಗದ ಮುಖ್ಯಸ್ಥರು ವಂದಿಸಿದರು ಮತ್ತು ಪ್ರೂ. ಮಂಜುನಾಥ ಜಿ ಕಾರ್ಯಕ್ರಮವನ್ನು ನಿರೂಪಿಸಿದರು.
ಇಂಗ್ಲೀಷ್ ಮೇಜರ್ ನಲ್ಲಿ ರ‌್ಯಾಂಕ್ ಪಡೆದ ವಿದ್ಯಾರ್ಥಿನಿಯರನ್ನು ಇಂಗ್ಲಿಷ್ ವಿಭಾಗದಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.