ಸ. ಪ್ರ. ದ. ಮಹಿಳಾ ಕಾಲೇಜಿನಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಮಟ್ಟದ ಎಸ್.ಇ.ಪಿ ಇಂಗ್ಲೀಷ್ ಪಠ್ಯಕ್ರಮದ ಒಂದು ದಿನದ ಕಾರ್ಯಗಾರ ಉದ್ಘಾಟನೆ
ಸ. ಪ್ರ. ದ. ಮಹಿಳಾ ಕಾಲೇಜಿನಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಮಟ್ಟದ ಎಸ್.ಇ.ಪಿ ಇಂಗ್ಲೀಷ್ ಪಠ್ಯಕ್ರಮದ ಒಂದು ದಿನದ ಕಾರ್ಯಗಾರ ಉದ್ಘಾಟನೆ
ದಾವಣಗೆರೆ, ಮಾರ್ಚ್ 02:
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ದಾವಣಗೆರೆ ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್ ಪಠ್ಯಕ್ರಮ” ಕುರಿತ ಒಂದು ದಿನದ ಕಾರ್ಯಗಾರವನ್ನು ದಿನಾಂಕ 02-03-2026 ರಂದು ಉದ್ಘಾಟಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕರಿಬಸಪ್ಪ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ದಾವಣಗೆರೆ ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ಡಾ. ಲೋಕೇಶ್ ಎಂ.ಯು. ಭಾಗವಹಿಸಿ, ಎಸ್.ಇ.ಪಿ ಪಠ್ಯಕ್ರಮದ ಉದ್ದೇಶ, ವಿನ್ಯಾಸ ಮತ್ತು ಪರಿಣಾಮಕಾರಿತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಗ್ಲೀಷ್ ವಿಭಾಗದ ಸಂಯೋಜಕರಾದ ಡಾ. ಫಕ್ಕೀರೇಶ ಹಳ್ಳಳ್ಳಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.
ವೇದಿಕೆಯಲ್ಲಿ ಉಪನ್ಯಾಸಕರಾದ ಜಯಣ್ಣ, ಭೀಮಪ್ಪ, ಮಹೇಶ್, ಮಧುಸೂದನ್, ವಿಜಯಕುಮಾರ್, ನಾಗನಗೌಡ ಹಾಗೂ ಶಿವರಾಜ್ ಉಪಸ್ಥಿತರಿದ್ದರು.
ಈ ಕಾರ್ಯಗಾರದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಪದವಿ ಕಾಲೇಜುಗಳಲ್ಲಿ ಇಂಗ್ಲೀಷ್ ಭಾಷೆ ಮತ್ತು ಸಾಹಿತ್ಯ ಬೋಧಿಸುವ ಪ್ರಾಧ್ಯಾಪಕರು ಭಾಗವಹಿಸಿ, ಪಠ್ಯಕ್ರಮದ ಅನುಷ್ಠಾನ, ಬೋಧನಾ ವಿಧಾನಗಳು ಹಾಗೂ ಮೌಲ್ಯಮಾಪನ ಕ್ರಮಗಳ ಕುರಿತು ವಿಚಾರ ವಿನಿಮಯ ನಡೆಸಿದರು.
ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.