logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

Karanataka Government budget Tourisom

ಪ್ರಸಕ್ತ ವರ್ಷದ ರಾಜ್ಯ ಬಜೆಟ್ನಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೊಸ ಹೊಸ ಯೋಜನೆಗಳು ಹಾಗೂ ಹೆಚ್ಚಿನ ಅನುದಾನಗಳನ್ನು ಘೋಷಿಸಿರುವುದು ಸಂತಸದ ವಿಚಾರವಾಗಿದೆ. ಕರಾವಳಿ ಕರ್ನಾಟಕದ ಪ್ರವಾಸೋದ್ಯಮ ತಾಣಗಳ ಸಾಮರ್ಥ್ಯವನ್ನು ಸದುಪಯೋಗಪಡಿಸಿಕೊಳ್ಳಲು ‘ಸಮಗ್ರ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ’ಯನ್ನು ಘೋಷಿಸಲಾಗಿದೆ.
ಇದರ ಜೊತೆಯಲ್ಲಿ ಜಾಯ್ ರೈಡ್ ಹಾಗೂ ರಿವರ್ ಕ್ರೂಸ್ಗಳಿಗೆ ಪ್ರೋತ್ಸಾಹ, ರಾಜ್ಯಕ್ಕೆ ಆಗಮಿಸುವ ಪ್ರವಾಸಿಗರಿಗೆ ಯಾವುದೇ ರೀತಿಯ ಅಹಿತಕರ ಅನುಭವ ಉಂಟಾಗಬಾರದೆಂಬ ನಿಟ್ಟಿನಲ್ಲಿ ಆಟೋ, ಕ್ಯಾಬ್ , ಟ್ಸಾಕ್ಸಿ ಚಾಲಕರು ಹಾಗೂ ಭದ್ರತಾ ಪೊಲೀಸ್ ಸಿಬ್ಬಂದಿಗೆ ಮೃದು ಕೌಶಲ್ಯ ತರಬೇತಿ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ರಾಜ್ಯ ಬಜೆಟ್ನಲ್ಲಿ ಘೋಷಿಸಲಾಗಿದೆ.
ಗದಗ - ಕಪ್ಪತಗುಡ್ಡ - ಲಕ್ಕುಂಡಿ ಪ್ರವಾಸೋದ್ಯಮ ಸರ್ಕ್ಯೂಟ್ ಹೌಸ್ ಅಭಿವೃದ್ಧಿ, ಮುಳ್ಳಯ್ಯನಗಿರಿ - ಸೀತಾಳಯ್ಯನಗಿರಿಯಿಂದ ಕೈಮರದವರೆಗೆ ಪಿಪಿಪಿ ಮಾದರಿಯ ರೋಪ್ ವೇ ನಿರ್ಮಾಣ ಸೇರಿದಂತೆ ಅಂಜನಾದ್ರಿ ಬೆಟ್ಟವನ್ನು ವಿಶ್ವ ಪ್ರಸಿದ್ಧ ತಾಣವನ್ನಾಗಿಸುವುದು ಮತ್ತು ಇನ್ನೂ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯ ಬಜೆಟ್ನಲ್ಲಿ ಪ್ರಾಶಸ್ತ್ಯ ನೀಡಲಾಗಿದೆ.
ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಸಮಗ್ರ ಮೂಲಸೌಕರ್ಯಗಳ ಅಭಿವೃದ್ಧಿಗೆ 10 ಕೋಟಿ ರೂಪಾಯಿಗಳನ್ನು ರಾಜ್ಯ ಬಜೆಟ್ನಲ್ಲಿ ಘೋಷಿಸಲಾಗಿದೆ. ಪ್ರವಾಸೋದ್ಯಮದ ಪ್ರಗತಿಗೆ ಈ ಬಾರಿಯ ಬಜೆಟ್ ಸಮರ್ಥ ಕೊಡುಗೆ ನೀಡಿದ್ದು ಭವಿಷ್ಯದಲ್ಲಿ ಕರ್ನಾಟಕ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶ್ವಕ್ಕೆ ಮಾದರಿ ಎನಿಸಲಿದೆ.

5
293 views

Comment