ವಜ್ಜಲ ಸರ್ಕಾರಿ ಪ್ರೌಢ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ವಾರ್ಷಿಕ ಸ್ನೇಹ ಸಮ್ಮೇಳನ
ಹುಣಸಗಿ: ತಾಲೂಕಿನ ವಜ್ಜಲ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ದಿನಾಂಕ 10 ಮಾರ್ಚ್ 2026 ರಂದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಅದ್ದೂರಿಯಾಗಿ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಯಾದಗಿರಿ ಜಿಲ್ಲೆಯ ಉಪನಿರ್ದೇಶಕರಾದ ಶ್ರೀ ಚೆನ್ನಬಸಪ್ಪ ಮುದೋಳ ಆಗಮಿಸಿ ವಿದ್ಯಾರ್ಥಿಗಳಿಗೆ ಉತ್ತಮವಾಗಿ ಅಭ್ಯಾಸ ಮಾಡಿ ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮವನ್ನು ಮಾಜಿ ಜಿ.ಪಂ. ಅಧ್ಯಕ್ಷರಾದ ಶ್ರೀ ರಾಜಶೇಖರ ಪಾಟೀಲ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಗುರು ಅಪ್ಪಾಗೋಳ ವಹಿಸಿಕೊಂಡಿದ್ದರು. ದಿವ್ಯ ಸಾನಿಧ್ಯವನ್ನು ವೇದಮೂರ್ತಿ ಸಿ.ಎಂ. ಹಿರೇಮಠ್, ನಿವೃತ್ತ ಮುಖ್ಯಗುರುಗಳು ಹಿರೂರ ಇವರು ವಹಿಸಿದ್ದರು.
ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷರಾದ ಯಂಕಣ್ಣ ದೋರಿ ಹಾಗೂ ಗ್ರಾಮದ ಗಣ್ಯರಾದ ಬಸನಗೌಡ ಬಾಗೇವಾಡಿ, ಬಸಣ್ಣ ಯಾಳಗಿ, ಶಿವಲಿಂಗಪ್ಪ ಬಜನಿ, ಅಪ್ಪುಗೌಡ ಪಾಟೀಲ, ಬಸವರಾಜ ಮೇಟಿ, ಸಿರಿಗಿರಿ ಸೌಕಾರ, ಬಸವರಾಜ ಹುಣಸಗಿ, ಭೀಮಣ್ಣ ಕೋಳ್ಳಿ, ಶ್ರೀಮತಿ ನಂದಮ್ಮ, ಸಿದ್ದಣಗೌಡ, ಯಂಕಣಗೌಡ, ಮಲ್ಲಣಗೌಡ ಅಮಲಿಹಾಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ನಿಜಾಮುದ್ದೀನ್ ಶಿಕ್ಷಕರು ನೆರವೇರಿಸಿದರು. ಗುರುನಾಥ ಶಿಕ್ಷಕರು ವಂದನಾರ್ಪಣೆ ಸಲ್ಲಿಸಿದರು.
ವರದಿ: ಸಂಗನಗೌಡ ಗಬಸಾವಳಗಿ