ಭಯಮುಕ್ತದಿಂದ ಪರೀಕ್ಷೆ ಎದುರಿಸಿ
ಐಮ್ ಮೀಡಿಯಾ.ಕುಷ್ಟಗಿ
ಅಮರೇಶ್ ತಾರಿವಾಳ
ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮೊದಲ ದಿನ ನಡೆದ ಪ್ರಥಮ ಭಾಷೆ ಕನ್ನಡ ವಿಷಯ ಪರೀಕ್ಷೆಯನ್ನು ವಿದ್ಯಾರ್ಥಿಗಳು ಉತ್ಸಾಹದಿಂದ ಎದುರಿಸಿದರು.
ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಗಮವಾಗಿ ಸುಸೂತ್ರವಾಗಿ ನಡೆದಿದ್ದು, ವಿದ್ಯಾರ್ಥಿಗಳಿಗೆ ಗುಲಾಬಿ ಹೂ ನೀಡಿ ಹಾಗೂ ಹೂ ಮಾಲೆ ಹಾಕುವ ಮೂಲಕ ಸಿಹಿ ತಿನಿಸಿ ಸ್ವಾಗತಿಸಿ ಶುಭ ಹಾರೈಸಿ ಭಯ ಮುಕ್ತವಾಗಿ ಪರೀಕ್ಷೆ ಎದುರಿಸುವಂತೆ ಧೈರ್ಯ ತುಂಬಿದರು.
ತಾಲೂಕಿನ ಒಟ್ಟು 15 ಪರೀಕ್ಷಾ ಕೇಂದ್ರಗಳ ಪೈಕಿ 4475 ವಿದ್ಯಾರ್ಥಿಗಳು ನೋಂದಣಿ ಮಾಡಿ ಕೊಂಡಿದ್ದು, ಇದರಲ್ಲಿ 4410 ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದರು. ಉಳಿದ 65 ವಿದ್ಯಾರ್ಥಿಗಳು ಗೈರಾಗಿದ್ದರು.
ಕಳೆದ ವರ್ಷದಂತೆ ಈ ವರ್ಷವೂ ಪರೀಕ್ಷಾ ಕೊಠಡಿಯಲ್ಲಿ ವೆಬ್ ಕಾಸ್ಟ್ ಸಂಪರ್ಕವಿರುವ ಸಿಸಿ ಕ್ಯಾಮೇರಾ ಅಳವಡಿಸಿದ್ದರಿಂದ ಕಟ್ಟುನಿಟ್ಟಾಗಿ ನಡೆಸಲಾಗಿದೆ.ಎಂದು ದೋಟಿ ಹಾಳ ಶಾಲೆಯ ವಿದ್ಯಾರ್ಥಿ ತೋಹಿದ್ ಕಾಟೇ ವಾಡಿ.ಅಭಿಪ್ರಾಯ ನೀಡಿದರು
ಅಧಿಕಾರಿಗಳ ಭೇಟಿ: ಬಿಇಒ ಉಮಾದೇವಿ
ಬಸಾಪೂರು, ತಹಸೀಲ್ದಾರ ಅಶೋಕ ಶಿಗ್ಗಾಂವಿ, ಕ್ಷೇತ್ರ ಸಮನ್ವಯಾಧಿಕಾರಿ ಜಗದೀಶಪ್ಪ ಮೆಣೇದಾಳ
ಸೇರಿದಂತೆ ವಿವಿಧ ಅಧಿಕಾರಿಗಳು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರೀಕ್ಷೆಯನ್ನು ಕಟ್ಟು ನಿಟ್ಟಾಗಿ ನಡೆಸಬೇಕು ಎಂದು ಸೂಚನೆ ನೀಡಿದರು.
ಪೊಲೀಸರು ಬಂದೋಬಸ್ತ್ ಒದಗಿಸಿದ್ದರು. ಸ್ಥಳೀಯ ಆಡಳಿತ ಕುಡಿವ ನೀರಿನ ಸೌಲಭ್ಯ ಒದಗಿಸಿದ್ದರು. ಮುಂಜಾಗೃತೆಯಾಗಿ ಆರೋಗ್ಯ ಸಿಬ್ಬಂದಿ ನೇಮಿಸಿದ್ದರು.
ಪರೀಕ್ಷಾ ಕೇಂದ್ರಕ್ಕೆ ಡಿಡಿಪಿಐ ಭೇಟಿ: ಡಿಡಿಪಿಐ
ಸೋಮಶೇಖರಗೌಡ ಪಾಟೀಲ ಪರೀಕ್ಷಾ ಕೊಠಡಿಗಳನ್ನು ಪರೀಶಿಲಿಸಿದರು. ಜಿಲ್ಲಾದ್ಯಂತ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಆರಂಭವಾಗಿದ್ದು, ಮೊದಲ ದಿನದ ಪರೀಕ್ಷೆ ಯಶಸ್ವಿಯಾಗಿದೆ ಶಿಕ್ಷಣ ಇಲಾಖೆ ನಿರ್ದೇಶನದಂತೆ ಪರೀಕ್ಷೆ ಕಟ್ಟುನಿಟ್ಟಾಗಿ ಎಂದು ಸುದ್ದಿಗಾರರಿಗೆ ನಡೆಸಲಾಗಿದೆ ತಿಳಿಸಿದರು.
ದೋಟಿಹಾಳ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ನಡೆದ ಕನ್ನಡ ಭಾಷೆ ಪರೀಕ್ಷೆ ಯಾವುದೇ ಗೊಂದಲಗಳಿಲ್ಲದೆ ಯಶಸ್ವಿಯಾಗಿ ಜರುಗಿದೆ. ಎಲ್ಲ ಕೊಠಡಿಗಳಲ್ಲಿ ಸಿಸಿ ಕ್ಯಾಮೇರಾ ಹಾಗೂ ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು. ಡಿಸುರೇಶ, ಮುಖ್ಯ ಅಧೀಕ್ಷಕರು ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರ ದೋಟಿಹಾಳ