ಕಂದಕೂರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಹಾವೀರ ಹಾಗೂ ಬುದ್ಧ ಜಯಂತಿ ಆಚರಣೆ
ಗುರುಮಠಕಲ್ : ತಾಲೂಕಿನ ಕಂದಕೂರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಹಾವೀರ ಮತ್ತು ಬುದ್ಧ ಜಯಂತಿಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಡಾ. ಸಿದ್ದಲಿಂಗರೆಡ್ಡಿ ಪಾಟೀಲ ಅವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಶಾಂತಿ ಮತ್ತು ಅಹಿಂಸೆಯ ಹರಿಕಾರರಾದ ಮಹಾವೀರ ಹಾಗೂ ಬುದ್ಧರ ತತ್ತ್ವಗಳು ಇಂದಿನ ಸಮಾಜಕ್ಕೆ ಅತ್ಯಗತ್ಯವಾಗಿವೆ ಎಂದು ತಿಳಿಸಿದರು. ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರಾದ ಶ್ರೀನಿವಾಸ್ ರೆಡ್ಡಿ ಸೇರಿದಂತೆ ಇತರ ಪ್ರಮುಖರು ಉಪಸ್ಥಿತರಿದ್ದು, ಮಹಾಪುರುಷರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಅವರ ಆದರ್ಶಗಳನ್ನು ಸ್ಮರಿಸಿದರು. ಈ ಕಾರ್ಯಕ್ರಮದಲ್ಲಿ ಆರೋಗ್ಯ ಕೇಂದ್ರದ ಎಲ್ಲಾ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪ್ಪಸ್ಥಿತರಿದ್ದರು.