logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

🪧 *ಪ್ರತಿಭಟನೆ ಪ್ರಕಟಣೆ* ಹಡಪದ ಸಮಾಜದ ವತಿಯಿಂದ ನಾಳೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ

ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿರುವ ಅನುಭವ ಮಂಟಪದ ತ್ರಿಪುರಾಂತಕ ಕೆರೆ ಹತ್ತಿರ 12ನೇ ಶತಮಾನದ ಅನೇಕ ಬಸವಾದಿ ಶರಣರ ಅರಿವಿನ ಗವಿಗಳು ಇರುವುದಾಗಿ ಇತಿಹಾಸ ಸಾರುತ್ತದೆ. ಅದೇ ರೀತಿ ವಿಶ್ವಗುರು, ಸಾಂಸ್ಕೃತಿಕ ನಾಯಕ ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣನವರ ಅರಿವಿನ ಗವಿಯೂ ಅಲ್ಲಿ ಅಸ್ತಿತ್ವದಲ್ಲಿದೆ.
ಆದರೆ, ಶಿವಶರಣ ಹಡಪದ ಅಪ್ಪಣ್ಣನವರ ಅರಿವಿನ ಗವಿಯನ್ನು ಬಸವಕಲ್ಯಾಣದ ಬಸವೇಶ್ವರ ದೇವಸ್ಥಾನದ ಪಂಚಕಮಿಟಿಯವರು ಅಕ್ರಮವಾಗಿ ಹಸ್ತಕ್ಷೇಪ ಮಾಡಿ, ರಾತ್ರೋರಾತ್ರಿ ಅನ್ಯ ಶರಣರ ಮೂರ್ತಿ ಪ್ರತಿಷ್ಠಾಪನೆ ಮಾಡಿರುವುದು ಅತ್ಯಂತ ಖಂಡನೀಯ ಘಟನೆ.
ಈ ಘಟನೆ ಶಿವಶರಣ ಹಡಪದ ಅಪ್ಪಣ್ಣನವರಿಗೆ ಹಾಗೂ ನಮ್ಮ ಸಮುದಾಯದ ಭಕ್ತಿಭಾವನೆಗಳಿಗೆ ತೀವ್ರ ಅವಮಾನವಾಗಿದ್ದು, ನಮ್ಮ ಇತಿಹಾಸದ ಮೌಲ್ಯವನ್ನು ಕುಗ್ಗಿಸುವ ಪ್ರಯತ್ನವಾಗಿದೆ.
ಹಡಪದ ಅಪ್ಪಣ್ಣನವರ ವಂಶಸ್ಥರು ಹಾಗೂ ಸಮಸ್ತ ಸಮಾಜದ ಭಕ್ತರಾದ ನಾವು, ನಮ್ಮ ಶರಣರ ಇತಿಹಾಸ ಹಾಗೂ ಅರಿವಿನ ಗವಿಯನ್ನು ಕಳೆದುಕೊಳ್ಳುವುದನ್ನು ಯಾವತ್ತೂ ಸಹಿಸುವುದಿಲ್ಲ. ಈ ಘಟನೆ ನಮ್ಮ ಭಾವನೆಗಳಿಗೆ ಗಂಭೀರ ಧಕ್ಕೆ ಉಂಟುಮಾಡಿದೆ.

✊ *ಘೋಷವಾಕ್ಯ:*

*"ಎಲ್ಲಿ ಬಸವಣ್ಣ ಅಲ್ಲಿ ಹಡಪದ ಅಪ್ಪಣ್ಣ"*

ಈ ಘಟನೆ ಕೇವಲ ಒಂದು ಸಮಾಜದ ಭಾವನೆಗೆ ಧಕ್ಕೆ ಅಲ್ಲ, ಅನುಭವ ಮಂಟಪದಲ್ಲಿ ಸಮಾನತೆ ಸಾರಿದ ವಿಶ್ವಗುರು ಬಸವಣ್ಣನವರಿಗೂ ಹಾಗೂ ಬಸವಾದಿ ಶರಣರಿಗೂ ಮಾಡಿದ ಅಪಮಾನವಾಗಿದೆ.
ಆದ್ದರಿಂದ, ಸಂಬಂಧಪಟ್ಟ ಪಂಚಕಮಿಟಿಯ ವಿರುದ್ಧ ನಾಳೆ ರಾಜ್ಯಾದ್ಯಂತ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು.

📍 ಜಿಲ್ಲಾ ಕೇಂದ್ರಗಳಲ್ಲಿ — ಜಿಲ್ಲಾಧಿಕಾರಿಗಳ ಮುಖಾಂತರ

📍 ತಾಲೂಕು ಕೇಂದ್ರಗಳಲ್ಲಿ — ತಹಸೀಲ್ದಾರ್ ಮುಖಾಂತರ
ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು.
ಈ ಹೋರಾಟದಲ್ಲಿ ಸಮಸ್ತ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕೆಂದು ವಿನಂತಿ.

ಪ್ರಕಟಣೆ:
ಚಿದಾನಂದ ಬಸರಕೋಡ
ರಾಜ್ಯ ಪ್ರಧಾನ ಕಾರ್ಯದರ್ಶಿಗಳು
ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘ (ರಿ), ಬೆಂಗಳೂರು

46
8906 views

Comment