logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಪತ್ರಕರ್ತ ವೆಂಕಟೇಶ ಸಂಪ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ KUWJ ವಾರ್ಷಿಕ ರಾಜ್ಯ ಪ್ರಶಸ್ತಿ ಪ್ರದಾನ. ಪತ್ರಕರ್ತ, ಸಂಪದ ಸಾಲು ಪತ್ರಿಕೆಯ ಸಂಪಾದಕರಾದ ವೆಂಕಟೇಶ ಎಸ್

ಪತ್ರಕರ್ತ ವೆಂಕಟೇಶ ಸಂಪ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ KUWJ ವಾರ್ಷಿಕ ರಾಜ್ಯ ಪ್ರಶಸ್ತಿ ಪ್ರದಾನ.


ಪತ್ರಕರ್ತ, ಸಂಪದ ಸಾಲು ಪತ್ರಿಕೆಯ ಸಂಪಾದಕರಾದ ವೆಂಕಟೇಶ ಎಸ್ ಸಂಪ ಅವರಿಗೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ KUWJ ರಾಜ್ಯ ಪ್ರಶಸ್ತಿಯ, ಮಂಗಳ ಎಂ ಸಿ ವರ್ಗೀಸ್ ಪ್ರಶಸ್ತಿಯನ್ನು ಏಪ್ರಿಲ್ 12 ರಂದು ಬೀದರನಲ್ಲಿ ನೆಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಕರ್ನಾಟಕ ವಿಧಾನ ಸಭಾಧ್ಯಕ್ಷರಾದ ಯು ಟಿ ಖಾದರ್, ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್,ಅರಣ್ಯ ಹಾಗೂ ಪರಿಸರ ಖಾತೆ ಸಚಿವರಾದ ಈಶ್ವರ ಖಂಡ್ರೆ,ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಬೀದರ್ ಶಾಸಕರಾದ ಶೈಲೇಂದ್ರ ಬೆಲ್ದಾಳೆ, ಪ್ರದಾನ ಮಾಡಿದರು.

ವೆಂಕಟೇಶ ಸಂಪ ಅವರು
ಕಳೆದ 20 ವರ್ಷಗಳಿಂದ ನಿರಂತರವಾಗಿ ಸಂಪದ ಸಾಲು ಎನ್ನುವ ಧನಾತ್ಮಕ ಪತ್ರಿಕೆಯನ್ನು ನಡೆಸುತ್ತಿರುವ ವೆಂಕಟೇಶ ಸಂಪರವರ ಸಾವಿರಾರು ಲೇಖನಗಳು ರಾಜ್ಯದ ಎಲ್ಲಾ ಪತ್ರಿಕೆಗಳಲ್ಲಿ ಪ್ರಕಟವಾಗಿವೆ, ಧನಾತ್ಮಕವಾಗಿ ಸಮಾಜಮುಖಿಯಾಗಿ ಮತ್ತು ಯುವಕರಿಗೆ ಸ್ಪೂರ್ತಿದಾಯಕವಾಗಿ ಅವರ ಹಲವಾರು ಲೇಖನಗಳು ಸಂಪದ ಸಾಲು ಪತ್ರಿಕೆಯ ಸಂಪಾದಕೀಯದಲ್ಲಿಯೂ ಪ್ರಕಟವಾಗಿವೆ ಮತ್ತು ಜನಪ್ರಿಯತೆ ಪಡೆದಿದೆ, ಹಾಗೂ ರೇಡಿಯೋ ಟಿವಿಗಳಲ್ಲಿ ನೂರಾರು ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದಾರೆ. ಇವರು ಹಲವಾರು ಟೀವಿ ಚಾನಲ್ ಗಳ ಪ್ಯಾನಲ್ ಡಿಸ್ಕಷನ್ ಗಳಲ್ಲಿ ಭಾಗವಹಿಸುವುದರ ಜೊತೆಗೆ ಹಲವಾರು ಸಿನಿಮಾ ಧಾರವಾಹಿಗಳಲ್ಲಿ ನಟಿಸಿದ್ದಾರೆ.
ರಕ್ತದಾನ,ನೇತ್ರದಾನ,ಪರಿಸರ ಜಾಗೃತಿ ಅಭಿಯಾನ,ನೀರು ಉಳಿಸಿ ಅಭಿಯಾನ ಸೇರಿದಂತೆ ಹಲವಾರು ಸಾಮಾಜಿಕ ಕಾರ್ಯದಲ್ಲಿ ತೊಡಗಿದ್ದಾರೆ.ಎಂಬಿಎ ಪದವೀಧರ ಆಗಿರುವ ವೆಂಕಟೇಶ ಸಂಪ ಅವರು, ಹಲವು ಮಿಶ್ರ ಬೆಳೆಗಳನ್ನು ಬೆಳೆದು, ಸಾವಯವ ಕೃಷಿಯಲ್ಲೂ ಸಾಧನೆ ಮಾಡಿದ್ದಾರೆ.
"ಸಂಪದ ಫೌಂಡೇಶನ್ ಫಾರ್ ಪಬ್ಲಿಕ್ ಅವೇರ್ನಸ್" ಸಂಸ್ಥೆ ಮೂಲಕ ಹಲವಾರು ಸಾಮಾಜಿಕ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸುತ್ತಿದ್ದಾರೆ.

0
2524 views

Comment