logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಬಡವರ ಸೂರು ಹಾಗೂ ಕುಡಿಯುವ ನೀರು ಪೂರೈಕೆಗೆ ಸಭೆ

ದೇವನಹಳ್ಳಿ ಕ್ಷೇತ್ರದ ಬಡವರ ಸೂರು ಹಾಗೂ ಕುಡಿಯುವ ನೀರು ಪೂರೈಕೆಗೆ ನನ್ನ ಮೊದಲ ಆದ್ಯತೆ ಎಂದು ಸಚಿವ ಕೆ ಎಚ್ ಮುನಿಯಪ್ಪ ಹೇಳಿದರು.

ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅರ್ಹ ಬಡವರಿಗೆ ಆಶ್ರಯ ಯೋಜನೆಯಡಿ ಸೈಟ್ ಹಂಚಿಕೆ ಮಾಡಲು ಮೇ 15 ರೊಳಗೆ 2,000 ನಿವೇಶನಗಳನ್ನು ಸಿದ್ಧಪಡಿಸುವಂತೆ ಇಂದು ನಡೆದ ಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಪರ್ಯಾಯ ಬೋರ್‌ವೆಲ್ ವ್ಯವಸ್ಥೆ ಹಾಗೂ ಹೊಸ ಕೊಳವೆಬಾವಿಗಳಿಗೆ ತಕ್ಷಣ ವಿದ್ಯುತ್ ಸಂಪರ್ಕ ಕಲ್ಪಿಸಿ ನೀರು ಪೂರೈಸಲು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ಎನ್ ಅನುರಾಧ, ಜಿಲ್ಲಾ ಪಂಚಾಯಿತಿ ಸಿಇಒ ಡಾ. ವಾಸಂತಿ ಅಮರ್, ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್, ಗ್ಯಾರಂಟಿ ಯೋಜನೆ ಸಮಿತಿ ತಾಲ್ಲೂಕು ಅಧ್ಯಕ್ಷ ಜಗನ್ನಾಥ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

85
1298 views

Comment