logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ದಾವಣಗೆರೆ: ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ ಯಶಸ್ವಿ

ದಾವಣಗೆರೆ: 07.05.2026 ರಂದು ದಾವಣಗೆರೆಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ “ಕುಕಿಂಗ್ ವಿಥೌಟ್ ಫೈರ್” ಎಂಬ ಬೆಂಕಿ ರಹಿತ ಆಹಾರ ತಯಾರಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಹಲವಾರು ತಂಡಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು.



ಕಾರ್ಯಕ್ರಮದ ಅಂಗವಾಗಿ ಆಹಾರ ಮೇಳವೂ ಏರ್ಪಡಿಸಲಾಯಿತು. ವಿದ್ಯಾರ್ಥಿನಿಯರು ಕಾರಟ್ ಹಲ್ವಾ, ಫ್ರೂಟ್ ಸಲಾಡ್, ಚೂರಿ ಮುರಿ, ಮೊಸರು ಅವಲಕ್ಕಿ, ವಿವಿಧ ರುಚಿಯ ಜ್ಯೂಸ್‌ಗಳು, ಕೊಕೊನೆಟ್ ಬರ್ಫಿ, ಕುಕುಂಬರ್ ಬೋಟ್, ಟೊಮೇಟೊ ಚಾಟ್, ಆಪಲ್ ಪೇಡ ಮತ್ತು ಅವಲಕ್ಕಿ ಚಿತ್ರಾನ್ನ ಸೇರಿದಂತೆ ಹಲವಾರು ಪೌಷ್ಟಿಕ ಹಾಗೂ ರುಚಿಕರ ಆಹಾರಗಳನ್ನು ತಯಾರಿಸಿ ಪ್ರದರ್ಶನೆ ಮತ್ತು ಮಾರಾಟ ಮಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಪಾಲ್ಗೊಂಡು ಯಶಸ್ವಿ ಕಾರ್ಯಕ್ರಮವನ್ನಾಗಿ ಮಾಡಿದರು.

99
4073 views

Comment