logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ದಾವಣಗೆರೆ: ಎನ್‌ಎಸ್‌ಎಸ್. ಶಿಬಿರದಲ್ಲಿ ಮಾನಸಿಕ ಆರೋಗ್ಯ ಮತ್ತು ಸುರಕ್ಷತೆ ಕುರಿತು ಕಾರ್ಯಕ್ರಮ

ದಾವಣಗೆರೆ: ಎ.ವಿ.ಕೆ. ಕಾಲೇಜು ಹಾಗೂ ಹಳೆ ಬಿಸ್ಲೇರಿ ಆಶ್ರಯದಲ್ಲಿ ನಡೆಯುತ್ತಿರುವ ಎನ್‌ಎಸ್‌ಎಸ್. ವಿಶೇಷ ಶಿಬಿರದ ನಾಲ್ಕನೇ ದಿನದ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಅಗ್ನಿಶಾಮಕ ಅಧಿಕಾರಿಗಳಾದ ಉಪ್ಪಾರ ಮತ್ತು ರಫಿಕ್ ಅವರು ಬೆಂಕಿ ನಂದಿಸುವ ವಿಧಾನಗಳು, ಗ್ಯಾಸ್ ಲೀಕ್ ಸಮಯದಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳು ಮತ್ತು ಮುನ್ನೆಚ್ಚರಿಕೆಗಳ ಕುರಿತು ಪ್ರಾಯೋಗಿಕ ಮಾಹಿತಿ ನೀಡಿದರು. ಅಗ್ನಿ ಆಕಸ್ಮಿಕ ನಿರ್ವಹಣೆಯ ಪ್ರಾತ್ಯಕ್ಷಿಕೆ ಶಿಬಿರಾರ್ಥಿಗಳಲ್ಲಿ ಜಾಗೃತಿ ಮೂಡಿಸಿತು.

ಸಿಜಿ ಆಸ್ಪತ್ರೆಗೆ ಉಪಮುಖ್ಯ ವೈದ್ಯಾಧಿಕಾರಿಗಳಾದ ಡಾ. ಪ್ರಭು ಎಂ. ಬಿಸ್ಲೇರಿ ಮಾನಸಿಕ ಆರೋಗ್ಯದ ಮಹತ್ವ ಮತ್ತು ಯುವ ಪೀಳಿಗೆಯ ಉತ್ತಮ ಜೀವನಕ್ಕಾಗಿ ಒತ್ತಡ ನಿರ್ವಹಣೆ ಕುರಿತು ಉಪನ್ಯಾಸ ನೀಡಿದರು. ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಲಭ್ಯವಿರುವ ಶೈಕ್ಷಣಿಕ ಮತ್ತು ಉದ್ಯೋಗಾವಕಾಶಗಳ ಬಗ್ಗೆ ಡಾ. ತಿಪ್ಪೇಸ್ವಾಮಿ ಮಾಹಿತಿ ನೀಡಿದರು. ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ಸತೀಶ್ ಕಲಹಾಳ್ “ತಂಬಾಕು ಮುಕ್ತ ಯುವ ಅಭಿಯಾನ 2.0” ಕುರಿತು ಮಾತನಾಡಿ, ತಂಬಾಕು ಸೇವನೆಯ ಹಾನಿ ಮತ್ತು ಬಿಡುವ ಲಾಭಗಳನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಶ್ರೀಮತಿ ಜೀವಿತ ಎಂ.ಪಿ., ಶ್ರೀಮತಿ ಉಷಾ ಎಂ.ಆರ್., ಡಾ. ಲೋಹಿತ್, ಡಾ. ಸತೀಶ್, ಡಾ. ವೀಣಾ, ಡಾ. ರಾಜಕುಮಾರ, ಸೂರ್ಯಪ್ರಸಾದ್, ಕವಿತಾ ಎಂ.ಎಂ., ವಿಶ್ವನಾಥ ಡಿ.ಆರ್, ಪರಶುರಾಮ್ ಕಟಾವು ಕರ್, ಗ್ರಾಮಸ್ಥರೂ ಸೇರಿದಂತೆ ಅನೇಕರು ಭಾಗವಹಿಸಿದ್ದರು. ಕಾರ್ಯಕ್ರಮವು ಆರೋಗ್ಯ ಮತ್ತು ಸುರಕ್ಷತೆ ಕುರಿತ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಯಿತು.

0
0 views

Comment