logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಬೀದರದಲ್ಲಿ ಮೇ 18ರಂದು ಜಿಲ್ಲಾ ರಂಗಭೂಮಿ ಸಾಂಸ್ಕೃತಿಕ ಕಾರ್ಯಕ್ರಮ

ಬೀದರ: ಬೀದರ ನಗರದ ಅಂಬೇಡ್ಕರ್ ವೃತ್ತದ ಸಮೀಪ ಸವಿತಾ ಸಮಾಜ ಸಾಂಸ್ಕೃತಿಕ ಸಭಾಂಗಣದಲ್ಲಿ ಮೇ 18, 2026 ರಂದು ಬೆಳಿಗ್ಗೆ 10:30 ಗಂಟೆಗೆ 2025-26ನೇ ಸಾಲಿನ ಪರಿಶಿಷ್ಟ ಜಾತಿ ಸಂಘ ಸಂಸ್ಥೆಗಳ ಯೋಜನೆಯಡಿ ಜಿಲ್ಲಾ ಮಟ್ಟದ ರಂಗಭೂಮಿ ಕಲಾವಿದರ ಸಾಹಿತ್ಯ–ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.

ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಹಾಗೂ ಜೈ ಭವಾನಿ ರಂಗಭೂಮಿ ಕಲಾವಿದರ ಸಂಘ, ಚಿಟ್ಟಾ ಇವರ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುವ ರಂಗಭೂಮಿ ಕಲಾವಿದರು, ಕವಿಗಳು ಮತ್ತು ವಿವಿಧ ಸಾಂಸ್ಕೃತಿಕ ಕಲಾವಿದರು ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ಹಿರಿಯ ಸಾಹಿತಿ ಡಾ. ಜಗನಾಥ್ ಹೆಬ್ಬಾಳ್ಳೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು ಡಾ. ಸಂಜುಕುಮಾರ್ ಅತಿವಾಳೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀ ಸಿದ್ರಾಮ ಶಿಂಧೆ ಭಾಗವಹಿಸಲಿದ್ದಾರೆ.

ಜೈ ಭವಾನಿ ರಂಗಭೂಮಿ ಕಲಾವಿದರ ಸಂಘ ಬೀದರ ಅಧ್ಯಕ್ಷರಾದ ಶ್ರೀ ಶೇಷಾಪ್ಪ ಚಿಟ್ಟಾ ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

0
468 views

Comment