ಬೀದರ: ರೈತರು ಮೇಳಿಗೆಗೆ ಮುತ್ತಿಗೆ ಹಾಕಿ ಹೋರಾಟ ಘೋಷಣೆ
ಬೀದರ: ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಬೀದರ ಜಿಲ್ಲಾ ಘಟಕವು ಮೇ 15, 2026 ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಉಗ್ರ ಹೋರಾಟ ನಡೆಸುವುದಾಗಿ ಘೋಷಿಸಿದೆ. ಈ ಹೋರಾಟದ ಮುಖ್ಯ ಕಾರಣ ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಬಾಕಿ ಇರುವ ಕಬ್ಬಿನ ಬಿಲ್‌ಗಳನ್ನು ಸಂಪೂರ್ಣವಾಗಿ ಪಾವತಿಸಬೇಕೆಂಬ ಆಗ್ರಹ.
ಜಿಲ್ಲಾಧಿಕಾರಿಗಳು ಏಪ್ರಿಲ್ ತಿಂಗಳ ಅಂತ್ಯದೊಳಗೆ ಎಲ್ಲಾ ಸಕ್ಕರೆ ಕಾರ್ಖಾನೆಗಳಿಂದ ಪಾವತಿಸುವ ಭರವಸೆ ನೀಡಿದ್ದರೂ, ನಿಗದಿತ ಅವಧಿ ಕಳೆದ ಬಳಿಕವೂ ರೈತರಿಗೆ ಹಣ ಪಾವತಿಯಾಗಿಲ್ಲ ಎಂದು ಸಂಘಟನೆ ಆರೋಪಿಸಿದೆ. ರೈತ ಸಂಘವು ಒಂದು ವಾರದ ಗಡುವನ್ನು ನೀಡಿದ್ದರೂ ಯಾವುದೇ ಸ್ಪಷ್ಟ ಕ್ರಮ ಕೈಗೊಳ್ಳದ ಕಾರಣ ಮೇ 15ರಂದು ಹೋರಾಟ ನಡೆಸಲು ನಿರ್ಧರಿಸಲಾಗಿದೆ ಎಂದು ದಯಾನಂದ ಸ್ವಾಮಿ ಸಿರ್ಸಿ ತಿಳಿಸಿದ್ದಾರೆ.