logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಬೀದರ: ರಾಜ್ಯ ಮಟ್ಟದ ಸಾಹಿತ್ಯ ಗೋಷ್ಠಿಗೆ ಡಾ. ಸುಬ್ಬಣ್ಣ ಕರಕನಳ್ಳಿ ಆಹ್ವಾನ

ಬೀದರ: ಜೂನ್ 5 ರಂದು ಪೂಜ್ಯ ಡಾ. ಚನ್ನಬಸವ ಪಟ್ಟದೇವರು ಜಿಲ್ಲಾ ರಂಗಮಂದಿರದಲ್ಲಿ ವಿಶ್ವ ಕನ್ನಡಿಗರ ಸಂಸ್ಥೆ ನೌಬಾದ ಬೀದರ ಹಾಗೂ ಕರ್ನಾಟಕ ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ 2025-26 ನೇ ಸಾಲಿನ ಸಂಘ ಸಂಸ್ಥೆಗಳ ಸಾಮಾನ್ಯ ಯೋಜನೆ ಅಡಿಯಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣ ನಡೆಯಲಿದೆ. ಈ ಸಂಕಿರಣದಲ್ಲಿ ಕರ್ನಾಟಕ ಉಸಿರಾಗಲ್ಲಿ ಕನ್ನಡ ಶಿರೋನಾಮೆ ಅಡಿಯಲ್ಲಿ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ, ರಾಷ್ಟ್ರೀಯ ಉದ್ಯೋಗ ನೀತಿ ಪರಿಷ್ಕೃತ ಮಹಿಷಿ ವರದಿ, ಸ್ಥಳೀಯರಿಗೆ ಉದ್ಯೋಗ ನೀಡುವ ಕನಸು, ಮತ್ತು ಕನ್ನಡಿಗರಿಗೆ ಉದ್ಯೋಗದ ಹೋರಾಟದ ಹಾದಿ ಕುರಿತು ಚರ್ಚೆ ನಡೆಯಲಿದೆ.

ಬ್ಯಾಂಕ್‌ಗಳಲ್ಲಿ ಕನ್ನಡಿಗರಿಗೆ ಉದ್ಯೋಗ ದೊರಕದಿರುವುದು ಮತ್ತು ಇತರ ಕನ್ನಡ ಪರ ಸಂಘಟನೆಗಳ ಹೋರಾಟಗಳ ಬಗ್ಗೆ ಕೂಡ ಈ ವಿಚಾರ ಸಂಕಿರಣದಲ್ಲಿ ಚರ್ಚಿಸಲಾಗುವುದು. ಕನ್ನಡಿಗರಿಗೆ ಉದ್ಯೋಗ ನೀಡಲು ಸರ್ಕಾರಿ ಜವಾಬ್ದಾರಿಯ ಕುರಿತು ಉಪನ್ಯಾಸ ಮತ್ತು ಕವಿತಾ ವಾಚನದ ಅವಕಾಶವಿರುತ್ತದೆ. ವಿಶ್ವ ಕನ್ನಡಿಗರ ಸಂಸ್ಥೆಯ ಅಧ್ಯಕ್ಷ ಡಾ. ಸುಬ್ಬಣ್ಣ ಕರಕನಳ್ಳಿ ಮೇ 28 ರೊಳಗೆ ಹೆಸರು ಮತ್ತು ಆಯ್ಕೆ ಮಾಡಿಕೊಂಡ ವಿಷಯದ ಸಂಕ್ಷಿಪ್ತ ಮಾಹಿತಿಯನ್ನು 9901612139 ಗೆ ಸಲ್ಲಿಸುವಂತೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

11
1598 views

Comment