logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಹಿಂಭಾಕಿ ಹಣ ಬಿಡುಗಡೆಗಾಗಿ ಹೈಕೋರ್ಟ್ ಮೊರೆ

ಬೆಂಗಳೂರು: ಕಾಂಗ್ರೇಸ್ ಸರ್ಕಾರ ಭಾಕಿ ಉಳಿಸಿ ಕೊಂಡಿರುವ ಗೃಹಲಕ್ಷ್ಮಿ ಯೋಜನೆಯ ಹಿಂಭಾಕಿ ಹಣ ಬಿಡುಗಡೆ ಮಾಡಲು ಇಬ್ಬರು ಮಹಿಳೆಯರು ಹೈಕೋರ್ಟ್ ಮೊರೆ ಹೋಗಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಯ ಮಾಸಿಕ ಧನ ಸಹಾಯ ಸರಿಯಾಗಿ ತಲುಪುತ್ತಿಲ್ಲ ಎಂದು ಬೇಸತ್ತು ಆರ್. ಗಂಗಾ ಮತ್ತು ಜಿ. ಡಿ. ಪವಿತ್ರಾ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಬಸವೇಶ್ವರ ನಗರದ ನಿವಾಸಿ ಆರ್. ಗಂಗಾ ಮತ್ತು ನಂದಿನಿ ಲೇಔಟ ನಿವಾಸಿ ಜಿ. ಡಿ. ಪವಿತ್ರಾ ಅವರು 2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಿಂಭಾಕಿ ಹಣ ಬಿಡುಗಡೆ ಮಾಡಲು ಆದೇಶ ನೀಡುವಂತೆ ಹೈಕೋರ್ಟ್ ಬಳಿ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಅವರು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದು, ಗೃಹಲಕ್ಷ್ಮಿ ಯೋಜನೆಯಡಿ ಹಣ ಬಿಡುಗಡೆಗೆ ಸಂಬಂಧಿಸಿದ ಕ್ರಮಗಳನ್ನು ತ್ವರಿತಗೊಳಿಸಲು ಆಗ್ರಹಿಸಿದ್ದಾರೆ.

3
308 views

Comment