ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಹಿಂಭಾಕಿ ಹಣ ಬಿಡುಗಡೆಗೆ ಅರ್ಜಿ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೇಸ್ ಸರಕಾರದ ಮಹಾತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯ ಮಾಸಿಕ ಧನ ಸಹಾಯ ಸರಿಯಾಗಿ ತಲುಪುತ್ತಿಲ್ಲ ಎಂದು ಬೆಂಗಳೂರಿನ ಇಬ್ಬರು ಮಹಿಳೆಯರು ಹೈಕೋರ್ಟ್ ಮೊರೆ ಹೋಗಿದ್ದಾರೆ. ಬಸವೇಶ್ವರ ನಗರದ ನಿವಾಸಿ ಆರ್. ಗಂಗಾ ಮತ್ತು ನಂದಿನಿ ಲೇಔಟ ನಿವಾಸಿ ಜಿ. ಡಿ. ಪವಿತ್ರಾ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ, ಈ ಸಂಬಂಧ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಅರ್ಜಿಯಲ್ಲಿ ಅವರು 2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಿಂಭಾಕಿ ಹಣವನ್ನು ಸರಕಾರ ಬಿಡುಗಡೆ ಮಾಡುವಂತೆ ಯಾಚಿಸಿದ್ದಾರೆ. ಈ ಪ್ರಕರಣದಲ್ಲಿ ಹೈಕೋರ್ಟ್ ಸರ್ಕಾರಕ್ಕೆ ಆದೇಶ ನೀಡುವಂತೆ ಮನವಿ ಮಾಡಲಾಗಿದೆ, ಇದರಿಂದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ತಡವಾಗದೆ ಹಣ ತಲುಪಲಿದೆ ಎಂದು ನಿರೀಕ್ಷಿಸಲಾಗಿದೆ.