ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಹಿಂಭಾಕಿ ಹಣ ಬಿಡುಗಡೆಗಾಗಿ ಮಹಿಳೆಯರು ಹೈಕೋರ್ಟ್ ಮೆಟ್ಟಿಲೇರಿದರು
ಬೆಂಗಳೂರು: ಕಾಂಗ್ರೇಸ್ ಸರಕಾರದ ಮಹಾತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯ ಮಾಸಿಕ ಧನ ಸಹಾಯ ಸರಿಯಾಗಿ ತಲುಪುತ್ತಿಲ್ಲ ಎಂದು ಬೇಸತ್ತ ಇಬ್ಬರು ಮಹಿಳೆಯರು ಹೈಕೋರ್ಟ್ ಮೊರೆ ಹೋಗಿದ್ದಾರೆ. ಆರ್. ಗಂಗಾ ಮತ್ತು ಜಿ. ಡಿ. ಪವಿತ್ರಾ ಅವರು ಗೃಹಲಕ್ಷ್ಮಿ ಯೋಜನೆಯಡಿ 2025ರ ಫೆಬ್ರುವರಿ ಮತ್ತು ಮಾರ್ಚ್ ತಿಂಗಳ ಹಿಂಭಾಕಿ ಹಣ ಬಿಡುಗಡೆ ಮಾಡಲು ಸರಕಾರಕ್ಕೆ ಆದೇಶ ನೀಡುವಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಈ ಸಂಬಂಧ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಲಾಗಿದೆ. ಮಹಿಳೆಯರು ಸರಕಾರದಿಂದ ಗೃಹಲಕ್ಷ್ಮಿ ಯೋಜನೆಯ ಹಿಂಭಾಕಿ ಹಣವನ್ನು ಕೂಡಿಸುವಂತೆ ಕೋರಿದ್ದಾರೆ ಮತ್ತು ಈ ಪ್ರಕರಣವು ಹೈಕೋರ್ಟ್ ಮುಂದೆ ಪ್ರಸ್ತುತವಾಗಿದೆ.