logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಶ್ರೀ ಮಾದಾರ ಚನ್ನಯ್ಯ ಸೇವಾ ಸಮಿತಿಯ ನೂತನ ಪದಾಧಿಕಾರಿಗಳ ನೇಮಕ

ಬೀದರ್: ಶ್ರೀ ಮಾದಾರ ಚನ್ನಯ್ಯ ಸೇವಾ ಸಮಿತಿ ಕರ್ನಾಟಕ ರಾಜ್ಯ ಸಮಿತಿಯಿಂದ ಬೀದರ್ ಜಿಲ್ಲೆಯ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.ಜಿಲ್ಲಾಧ್ಯಕ್ಷರಾಗಿ ಕಮಲಾಕರ ಹೆಗಡೆ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಶಿವಣ್ಣಾ ಹಿಪ್ಪಳಗಾಂವ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯ ಕಾರ್ಯಾಧ್ಯಕ್ಷ ಶ್ರೀ ದೇವೇಂದ್ರನಾಥ. ಕೆ. ನಾದ, ವಿಭಾಗೀಯ ಉಸ್ತುವಾರಿ ಶ್ರೀ ವಿಜಯಕುಮಾರ ಅಡಿಕೆ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ಮಂಜುನಾಥ ಕೊಂಡಪಲ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಡಾ. ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿಯವರ ಆಶೀರ್ವಾದ ಮತ್ತು ಮಾರ್ಗದರ್ಶನದೊಂದಿಗೆ, ಮಾದಿಗ ಸಮಾಜದ ಶೈಕ್ಷಣಿಕ ಉನ್ನತಿ, ಯುವಜನ ಸಬಲೀಕರಣ ಹಾಗೂ ಆಧ್ಯಾತ್ಮಿಕ ಮೌಲ್ಯಗಳ ಆಧಾರದ ಮೇಲೆ ಸಮುದಾಯದ ಸರ್ವಾಂಗೀಣ ಅಭಿವೃದ್ಧಿ ಉದ್ದೇಶದಿಂದ ಈ ನೇಮಕಾತಿ ಮಾಡಲಾಗಿದೆ ಎಂದು ತಿಳಿಸಲಾಗಿದೆ.ಈ ಸಂದರ್ಭದಲ್ಲಿ ಫರ್ನಾಂಡಿಸ ಹಿಪ್ಪಳಗಾಂವ, ಸ್ವಾಮಿದಾಸ ಮೇಘಾ, ದತ್ತಾತ್ರಿ ಜ್ಯೋತಿ, ವೀರಶೆಟ್ಟಿ ಬೊಂಬಳಗಿ, ಅಭಿ ಕಾಳೆ ಉಪಸ್ಥಿತರಿದ್ದರು.ನೂತನ ಪದಾಧಿಕಾರಿಗಳು ಸಂಘಟನೆಯ ಉದ್ದೇಶಗಳು, ನಿಯಮಾವಳಿ ಹಾಗೂ ಆದರ್ಶಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸಿ, ಸಮಾಜದ ಎಲ್ಲ ವರ್ಗಗಳ ಸಹಕಾರದೊಂದಿಗೆ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವಂತೆ ಸೂಚಿಸಲಾಗಿದೆ.ಜಿಲ್ಲೆಯ ಎಲ್ಲಾ ತಾಲೂಕು, ವಿಧಾನಸಭಾ ಕ್ಷೇತ್ರ, ಹೋಬಳಿ ಹಾಗೂ ಗ್ರಾಮ ಮಟ್ಟದಲ್ಲಿ ಸಂಘಟನೆಯನ್ನು ವಿಸ್ತರಿಸಿ, ಯುವಕರು, ಮಹಿಳೆಯರು ಹಾಗೂ ವಿದ್ಯಾರ್ಥಿಗಳನ್ನು ಸಂಘಟನೆಯ ಮುಖ್ಯವಾಹಿನಿಗೆ ತಂದು ಸಮಾಜದ ಏಳಿಗೆಗಾಗಿ ಶ್ರಮಿಸುವಂತೆ ರಾಜ್ಯ ಸಮಿತಿ ಆಶಿಸಿದೆ.

19
1961 views

Comment