logo
Select Language
Hindi
Bengali
Tamil
Telugu
Marathi
Gujarati
Kannada
Malayalam
Punjabi
Urdu
Oriya

ಕೆಎಚ್ಎಂ ಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎಸ್. ಆರ್. ರವಿಕುಮಾರ್

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾದರಿ ಸಚಿವರಾಗಿರುವ ಕೆಎಚ್ ಮುನಿಯಪ್ಪ ಅವರನ್ನು ಮುಖ್ಯಮಂತ್ರಿಯಾಗುತ್ತಿರುವ ಡಿ.ಕೆ. ಶಿವಕುಮಾರ್ ಸಂಪುಟದಲ್ಲಿ ಮುನಿಯಪ್ಪ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ ಪರಿಗಣಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎಸ್ ಆರ್ ರವಿಕುಮಾರ್ ತಿಳಿಸಿದರು.

ದೇವನಹಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ವಿಧಾನಸಭಾ ಚುನಾವಣೆ 15 ದಿವಸ ಇರುವಾಗ ಟಿಕೆಟ್ ತಂದರು. ಪಕ್ಷದ ಎಲ್ಲಾ ಮುಖಂಡರು ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಿ ಸಂಘಟಿಸಿ ಅವರನ್ನು ಗೆಲ್ಲಿಸಿಕೊಂಡು ಬಂದವು. ದೇವನಹಳ್ಳಿ ಇತಿಹಾಸದಲ್ಲಿ ಯಾರು ಸಹ ಸಚಿವರಾಗಿರಲಿಲ್ಲ. ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಮೊದಲ ಬಾರಿಗೆ ಕೆ ಎಚ್ ಮುನಿಯಪ್ಪ ಸಚಿವರಾಗಿದ ಕೀರ್ತಿ ದೇವನಹಳ್ಳಿಗೆ ಸಲ್ಲುತ್ತದೆ. ಸಚಿವ ಸ್ಥಾನದ ಜೊತೆ ಉಪಮುಖ್ಯಮಂತ್ರಿ ಸ್ಥಾನ ಸಹ ಸಿಕ್ಕಿದರೆ ದೇವನಹಳ್ಳಿ ಇತಿಹಾಸದ ಪುಟಗಳಲ್ಲಿ ರಾರಾಜಿಸುತ್ತದೆ. ಕಾಂಗ್ರೆಸ್ ಮುಖಂಡರ ನಿಯೋಗ ಕಾಂಗ್ರೆಸ್ ನಾಯಕರ ಮತ್ತು ಹೈಕಮಾಂಡ್ ಮತ್ತು ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಉಪಮುಖ್ಯಮಂತ್ರಿ ಸ್ಥಾನ ಹಾಗೂ ಪ್ರಬಲ ಖಾತೆ ನೀಡುವಂತೆ ಮನವಿ ಮಾಡುತ್ತೇವೆ ಎಂದು ಹೇಳಿದರು.

ದೇವನಹಳ್ಳಿ ಪಟ್ಟಣದ ಇತಿಹಾಸದಲ್ಲಿ 25 ಕೋಟಿ ವೆಚ್ಚದಲ್ಲಿ ಶಾಶ್ವತವಾಗಿ ಉಳಿಯುವ ವೈಟ್ ಟೈಪಿಂಗ್ ರಸ್ತೆಯನ್ನು ನಿರ್ಮಾಣ ಮಾಡುವುದರ ಮೂಲಕ ಸಚಿವ ಮುನಿಯಪ್ಪನವರು ಮಾದರಿಯಾಗಿದ್ದಾರೆ. ಗುಣಮಟ್ಟದ ರಸ್ತೆ ಆಗಿರುವುದರಿಂದ ಪ್ರತಿ ಜನರಿಗೂ ಅನುಕೂಲ ಕಲ್ಪಿಸಿದ್ದಾರೆ. ಡಿಕೆ ಶಿವಕುಮಾರ್ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ ವ್ಯಕ್ತಿಯಾಗಿರುವ ಮುನಿಯಪ್ಪ ಅವರಿಗೆ ಸಂಪುಟದಲ್ಲಿ ಹೆಚ್ಚಿನ ಜವಾಬ್ದಾರಿ ನೀಡಿ ಪಕ್ಷದ ಬಲವರ್ಧನೆ ಹಾಗೂ ಹೊಸ ಹೊಸ ಯೋಜನೆಗಳನ್ನು ರೂಪಿಸಲು ಹೆಚ್ಚು ಸಲಹೆ ಮಾರ್ಗದರ್ಶನ ನೀಡಿದ್ದಾರೆ ಎಂದು ಹೇಳಿದರು.

ದೇವನಹಳ್ಳಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ ಜಗನ್ನಾಥ್ ಮಾತನಾಡಿ ಕಾಂಗ್ರೆಸ್ ಪಕ್ಷದ ಕಟ್ಟಾಳುವಾಗಿ, 7 ಬಾರಿ ಕೋಲಾರ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ, ಪ್ರಸ್ತುತ ರಾಜ್ಯ ಸರಕಾರದಲ್ಲಿ ಸಚಿವರಾಗಿರುವ ಕೆ.ಹೆಚ್.ಮುನಿಯಪ್ಪ ಅವರ ಕೊಡುಗೆ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಾಗಿದೆ.

ಪಕ್ಷವು ಸಂಕಷ್ಟಕ್ಕೆ ಸಿಲುಕಿದ್ದ ಸಂದರ್ಭದಲ್ಲಿ ಪಕ್ಷ ಕಟ್ಟುವಂತಹ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್ ನಿಂದ ಕೊಟ್ಟಿರುವ ಹಲವಾರು ಚುನಾವಣಾ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಹಲವು ರಾಜ್ಯಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ನೆರವಾಗಿದ್ದಾರೆ. ರಾಜ್ಯದಲ್ಲಿಯೂ ಹಲವಾರು ತಾಲೂಕುಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲು ಕಾರಣರಾಗುವ ಮೂಲಕ ನಿಷ್ಟಾವಂತ ಕಾರ್ಯಕರ್ತನಾಗಿ ದುಡಿದ್ದಾರೆ. ಕಾಂಗ್ರೆಸ್ ಪಕ್ಷವು, ಪರಿಶಿಷ್ಟ ಜಾತಿಯ ಎಡಗೈ ಸಮುದಾಯಕ್ಕೆ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡುವ ಮೂಲಕ, ಶೋಷಿತ ಸಮಾಜಗಳ ಮೇಲಿನ ತನ್ನ ಪ್ರೀತಿಯನ್ನು ತೋರ್ಪಡಿಸಬೇಕಿದೆ ಎಂದು ಹೇಳಿದರು.

ಈ ವೇಳೆಯಲ್ಲಿ ಕೆಪಿಸಿಸಿ ಸದಸ್ಯ ಚಿನ್ನಪ್ಪ, ಜಿಪಂ ಮಾಜಿ ಉಪಾಧ್ಯಕ್ಷೆ ಅನಂತಕುಮಾರಿ ಚಿನ್ನಪ್ಪ, ಮಾಜಿ ಪುರಸಭಾ ಅಧ್ಯಕ್ಷ ಎಂ ಮುನಿಕೃಷ್ಣ, ಮಾಜಿ ಪುರಸಭಾ ಸದಸ್ಯರಾದ ಎಸ್ ಸಿ ಚಂದ್ರಪ್ಪ, ಎನ್.ರಘು, ವೇಣುಗೋಪಾಲ್, ಸುಮಿತ್ರ ಮಂಜುನಾಥ್, ಗೀತಾ ಶ್ರೀಧರ್ ಮೂರ್ತಿ, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಸಾಗರ್, ನಾಮಿನಿ ಪುರಸಭಾ ಸದಸ್ಯರಾದ ಮುನಿರಾಜ್ ಬರ್ಮಾ, ನರ್ವೀಜ್ ಪಾಷಾ, ಮರಿಯಪ್ಪ, ಸುಶೀಲಾ ಆರ್ ಕುಮಾರ್, ಶಾಂತಲಾ ಚಂದ್ರಶೇಖರ್, ದೇವನಹಳ್ಳಿ ತಾಲೂಕುಕೃಷಿಕ ಸಮಾಜದ ನಿರ್ದೇಶಕ ಮಂಜುನಾಥ್, ಮುಖಂಡರಾದ ಶ್ರೀಧರ್ ಮೂರ್ತಿ , ಮಂಜುನಾಥ್, ಎನ್ ವೆಂಕಟೇಶ್, ಸೋಮಶೇಖರ್, ಎನ್ ಮುನಿರಾಜು ಮತ್ತಿತರರು ಇದ್ದರು.

43
1646 views

Comment