ದೇವನಹಳ್ಳಿ ತಾಲ್ಲೂಕು ಪಂಚಾಯಿತಿ ನೂತನ ಇಒ ಮುನಿರಾಜು ಅಧಿಕಾರ ಸ್ವೀಕಾರ
*ದೇವನಹಳ್ಳಿ ತಾಲ್ಲೂಕು ಪಂಚಾಯಿತಿ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಮುನಿರಾಜು ಅಧಿಕಾರ ಸ್ವೀಕಾರ*
ದೇವನಹಳ್ಳಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದ ಕಚೇರಿಯಲ್ಲಿ ಈ ಹಿಂದೆ ಕಾರ್ಯ ನಿರ್ವಾಹಕ ಅಧಿಕಾರಿ ಆಗಿ ಸೇವೆ ಸಲ್ಲಿಸಿದ ಶ್ರೀನಾಥ್ ಗೌಡ ಅವರ ವರ್ಗಾವಣೆ ಹಿನ್ನಲೆಯಲ್ಲಿ ಅವರ ಜಾಗಕ್ಕೆ ನೂತನವಾಗಿ ಇಒ ಮುನಿರಾಜು ಅಧಿಕಾರ ಸ್ವೀಕರಿಸಿದರು. ಇಒ ಶ್ರೀನಾಥ್ ಗೌಡ ಅವರು ಅಧಿಕಾರ ಹಸ್ತಾಂತರಿಸಿದರು.
ನೂತನ ಇಒ ಮುನಿರಾಜು ಮಾತನಾಡಿ, ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ, ಸ್ಥಳೀಯ ಸಮಸ್ಯೆಗಳ ಕುರಿತು ಆಲಿಸಲಾಗುವುದು. ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಸಮರ್ಪಕ ರೀತಿಯಲ್ಲಿ ಜನರಿಗೆ ದೂರೆಯುತ್ತಿರುವ ಬಗ್ಗೆ ಪರಿಶೀಲಿಸಲಾಗುವುದು. ಸರ್ಕಾರದ ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.
ಇದೇ ಸಂಧರ್ಭದಲ್ಲಿ ಗ್ರಾಮ ಪಂಚಾಯಿತಿ ಆಡಳಿತ ಅಧಿಕಾರಿಗಳು, ಪಿಡಿಒಗಳು, ತಾಪಂ ನೌಕರರು ಅಭಿನಂದನೆ ಸಲ್ಲಿಸಿದರು.
ವರದಿ ಹೈದರ್ ಸಾಬ್ 9743784848
ಚಿತ್ರ: